ಮೈಸೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿಸಿಕೊಂಡು ಮತ್ತೆ ಇದೀಗ ವಿಧಾನಪರಿಷತ್ ಚುನಾವಣೆಗೆ ರಾಜ್ಯ ಕಾಂಗ್ರೆಸ್ ನಾಯಕರು ಭರ್ಜರಿ ತಯಾರಿಯನ್ನು ನಡೆಸಿಕೊಳ್ಳುತ್ತಿದ್ದಾರೆ.
ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲ್ಲಬೇಕೆಂದರೆ, ಶಾಸಕರು ಹಾಗೂ ಮುಖಂಡರು ಸೇರಿಕೊಂಡು ಎಲ್ಲ ರೀತಿ ತಯಾರಿ ನಡೆಸಿಕೊಂಡು ಅಭ್ಯರ್ಥಿಗಳಿಗೆ ಗೆಲುವು ಸಾಧಿಸಲು ಯಾವೆಲ್ಲ ಕೆಲಸ ಮಾಡಬೇಕು, ಅದೆಲ್ಲ ಕೆಲಸವನ್ನು ಮಾಡಬೇಕೆಂದು ಸಚಿವ ಎಚ್.ಸಿ.ಮಹದೇವಪ್ಪ ಅವರು ಹೇಳಿದ್ದಾರೆ.
ಹೌದು, ಮುಂಬರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಗೆಲ್ಲಲು ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಬಿರುಸಿನ ಪ್ರಚಾರ ನಡೆಸಿ, ಮತದಾರರನ್ನು ತಲುಪಬೇಕು ಎಂದು ಜಿಲ್ಲಾ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು. ಲೋಕಸಭೆ ಚುನಾವಣೆಯಲ್ಲೂ ಇದೇ ಪ್ರದರ್ಶನ ಪುನರಾವರ್ತನೆಯಾಗಿದೆ. ಇದೀಗ ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ನೆಹರೂ ಪುಣ್ಯತಿಥಿ; ಪುಷ್ಪ ನಮನ ಸಲ್ಲಿಸಿದ ಸಿಎಂ
ಸಭೆಯಲ್ಲಿ ಸಚಿವ ಕೆ.ವೆಂಕಟೇಶ್, ಶಾಸಕರಾದ ಹರೀಶ್ ಗೌಡ, ತಿಮ್ಮಯ್ಯ, ದಿನೇಶ್ ಗೂಳಿಗೌಡ, ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಹಾಜರಿದ್ದರು.