18ನೇ ಆವೃತ್ತಿ ಐಪಿಎಲ್ ಪಂದ್ಯಾವಳಿಯಲ್ಲಿ ಆರ್ಸಿಬಿ ತಂಡವು ಫೈನಲ್ ಗೆ ತಲುಪಿರುವುದರಿಂದ ಆರ್ಸಿಬಿ ಅಭಿಮಾನಿಗಳು ಎಲ್ಲೆಡೆ ಸಂಭ್ರಮ ಆಚರಣೆ ಮಾಡುತ್ತಿದ್ದಾರೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ತರುಪಿರುವುದರಿಂದ ವಿಜಯ್ ಮಲ್ಯ ಅವರು ಆರ್ಸಿಬಿ ತಂಡಕ್ಕೆ ವಿಶ್ ಮಾಡಿದ್ದಾರೆ.
ಯೆಸ್… ಪಂಜಾಬ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದ ಆರ್ಸಿಬಿಗೆ ತಂಡಕ್ಕೆ ವಿಜಯ್ ಮಲ್ಯ ವಿಶ್ ಮಾಡಿದ್ದಾರೆ. ಈ ಕುರಿತು x ಕಥೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆರ್ಸಿಬಿ ಅತ್ಯುತ್ತಮ ಆಲ್-ರೌಂಡ್ ಪ್ರದರ್ಶನ ನೀಡಿದೆ. ಧೈರ್ಯದಿಂದ ಆಟವಾಡಿ, ಕಪ್ ಗೆಲ್ಲಿ ಎಂದು ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಫೈನಲ್ ಗೆ ಲಗ್ಗೆ ಇಟ್ಟ ಆರ್ ಸಿ ಬಿ
ಐಪಿಎಲ್ ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್ ಇತಿಹಾಸದಲ್ಲಿ 4ನೇ ಬಾರಿಗೆ ಆರ್ಸಿಬಿ ಫೈನಲ್ಗೆ ಲಗ್ಗೆ ಇಟ್ಟಿದೆ.
