ʼಲೋಕʼ ಗೆಲ್ಲಲು ಪದಾಧಿಕಾರಿಗಳಿಗೆ ಟಾಸ್ಕ್ ಕೊಟ್ಟ ವಿಜಯೇಂದ್ರ

ʼಲೋಕʼ ಗೆಲ್ಲಲು ಪದಾಧಿಕಾರಿಗಳಿಗೆ ಟಾಸ್ಕ್ ಕೊಟ್ಟ ವಿಜಯೇಂದ್ರ

ಬೆಂಗಳೂರು: ಇಂದು ಬಿಜೆಪಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯದ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೂತನ ಪದಾಧಿಕಾರಿಗಳ ಜೊತೆ ಸಭೆಯನ್ನು ಕೈಗೊಂಡಿದ್ದಾರೆ.

ಮಲ್ಲೇಶ್ವರಂ ನಲ್ಲಿರುವಂತಹ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಬಿಜೆಪಿಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ ವಿ ರಾಜೇಶ್ ಅವರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಹೌದು, ಕರ್ನಾಟಕದಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ನೇಮಕಗೊಂಡ ನಂತರ ಇದೇ ಮೊದಲ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಬಿ.ವೈ.ವಿಜಯೇಂದ್ರ ಇಂದು(ಡಿ. 27) ರಾಜ್ಯ ಪದಾಧಿಕಾರಿಗಳ ತಂಡದ ಸಭೆ ಮಾಡಿದರು. ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಮಾಡಿದರು.

ಅಲ್ಲದೇ ಪ್ರಮುಖವಾಗಿ ಪಕ್ಷಕ್ಕೆ ಮುಜುಗರ ತರುವಂತೆ ಬಹಿರಂಗ ಹೇಳಿಕೆಗಳನ್ನು ಕೊಡದಂತೆ ಪದಾಧಿಕಾರಿಗಳಿಗೆ ಸೂಚ್ಯವಾಗಿ ಸೂಚನೆ ನೀಡಿದ್ದಾರೆ. ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ವಿರುದ್ಧ 40 ಸಾವಿರ ಕೋಟಿ ರೂ. ಮೊತ್ತದ ಕೋವಿಡ್ ಅಕ್ರಮದ ಬಗ್ಗೆ ಮಾಡಿರುವ ಆರೋಪ ಈ ಸಭೆಯಲ್ಲಿ ಪ್ರಸ್ತಾಪವಾಯ್ತು. ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಬಹಳ ಡ್ಯಾಮೇಜ್ ಆಗುವ ಬಗ್ಗೆ ಸಭೆಯಲ್ಲಿ ಕೆಲವು ಪದಾಧಿಕಾರಿಗಳಿಂದ ಆತಂಕ ವ್ಯಕ್ತಪಡಿಸಿದ್ದಾರೆ.

 

Related