ವಿಜಯೇಂದ್ರ ಅವರಿಗೆ ನಮ್ಮ ಸಂಪೂರ್ಣ ಸಹಕಾರ ಇದೆ: ಶ್ರೀರಾಮುಲು

ವಿಜಯೇಂದ್ರ ಅವರಿಗೆ ನಮ್ಮ ಸಂಪೂರ್ಣ ಸಹಕಾರ ಇದೆ: ಶ್ರೀರಾಮುಲು

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಕಳೆದ ಕೆಲವು ತಿಂಗಳಿಂದ ಬಿಜೆಪಿ ಪಕ್ಷ ಅರಸ ನಿಲ್ಲದ ನಾಯಕನಂತೆ ರಾಜಕೀಯ ಮಾಡುತ್ತಿತ್ತು. ಆದರೆ ಈಗ ರಾಜ ಬಿಜೆಪಿಯಲ್ಲಿ, ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನವನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ ಬಿ ವೈ ವಿಜಯೇಂದ್ರ ಅವರಿಗೆ ನೀಡಿದ್ದಾರೆ.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ B.Y ವಿಜಯೇಂದ್ರ ಅವರಿಗೆ ನೀಡಿದ್ದರಿಂದ ಇತರೆ ಆಕಾಂಕ್ಷಿಗಳಿಗೆ ನಿರಾಸೆ ಮೂಡುವುದು ಸಹಜ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಪಕ್ಷದ ರಾಷ್ಟ್ರ ನಾಯಕರು ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಇದರಿಂದ ನಮಗೂ ಖುಷಿಯಾಗಿದೆ. ಆ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗುವುದು ಸಾಮಾನ್ಯ ಎಂದಿದ್ದಾರೆ.

ವಿಜಯೇಂದ್ರ ಅವರು ಯಡಿಯೂರಪ್ಪ ಗರಡಿಯಲ್ಲಿ ಪಳಗಿದ್ದಾರೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರ ಇರಲಿದೆ. ಅವರೊಟ್ಟಿಗೆ ಸೇರಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.

 

Related