ಮೋದಿ ಭೇಟಿಯಾದ ವಿಜಯೇಂದ್ರ

ಮೋದಿ ಭೇಟಿಯಾದ ವಿಜಯೇಂದ್ರ

ದೆಹಲಿ: ಕರ್ನಾಟಕ ರಾಜ್ಯದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷನಾಗಿ ನೇಮಕವಾಗಿರುವ ಬಿವೈ ವಿಜಯೇಂದ್ರ ಅವರು, ರಾಜ್ಯಾಧ್ಯಕ್ಷ ಆದಮೇಲೆ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತನಾಡಿದ ವಿಜಯೇಂದ್ರ ಅವರು, ಸಾಕ್ಷಾತ್ ತೇಜಸ್ಸಿನ ಭಾರತಾಂಬೆಯ ಮಹಾನ್ ಸುಪುತ್ರನ ದರ್ಶನ ಪಡೆದ ಅನುಭವವಾಯಿತು ಎಂದು ಹೇಳಿದರು.

ರಾಷ್ಟ್ರ ಭಕ್ತಿ, ಸಂಘ ನಿಷ್ಠೆ, ಸಮರ್ಪಣೆ, ಶಿಸ್ತು, ಬದ್ಧತೆ, ಕ್ರಿಯಾಶೀಲತೆ, ಸಾಧಿಸುವ ಛಲದ ಗುರಿ ಇವೆಲ್ಲಕ್ಕೂ ಭಾರತದ ಇತಿಹಾಸದಲ್ಲಿ ಉದಾಹರಿಸಬಲ್ಲ ಏಕೈಕ ವ್ಯಕ್ತಿತ್ವ ಮಾನ್ಯ ಮೋದಿ ಜೀ ಅವರದು, ಅವರ ಸ್ವಾವಲಂಬಿ ಹಾಗೂ ಬಲಿಷ್ಠ ಭಾರತ ಕಟ್ಟುವ ಮಹಾನ್ ಸಂಕಲ್ಪ ಪರಿಪೂರ್ಣವಾಗಿ ಈಡೇರಿದರೆ. ವಿಶ್ವಮಟ್ಟದಲ್ಲಿ ನಮ್ಮಭವ್ಯ ಭಾರತ ಅಗ್ರಸ್ಥಾನದಲ್ಲಿ ನಿಲ್ಲಲಿದೆ. ಈ ನಿಟ್ಟಿನಲ್ಲಿ ಅವರೊಂದಿಗೆ ಹೆಗಲು ಕೊಡುವ ಪುಣ್ಯದ ಕಾರ್ಯದಲ್ಲಿ ಸಮರ್ಪಿಸಿಕೊಳ್ಳಲು ‘ಬಿಜೆಪಿ-ಕರ್ನಾಟಕ’ದ ರಥ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಟ್ಟಿರುವುದು ನನ್ನ ಸೌಭಾಗ್ಯ ಎಂಬುದು ನನ್ನ ವಿನಮ್ರ ಭಾವವಾಗಿದೆ ಎಂದರು.

2024 ರ ಮಹಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮೋದಿ ಅವರ ಮಡಿಲಿಗೆ ಸಮರ್ಪಿಸಬೇಕೆಂಬ ನನ್ನ ಹೆಗ್ಗುರಿಯ ಹೆಜ್ಜೆಗೆ ಇಂದಿನ ಭೇಟಿಯ ಅವರ ಪ್ರೇರಣೆಯ ಮಾತುಗಳು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸ ಮೂಡಿಸಿದೆ ಎಂದು ಹೇಳಿದರು.

Related