ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮ ಮುಂದೂಡಿಕೆ

ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು,ನ. 13: ಬಿಜೆಪಿ ನೂತನ ಸಾರಥಿ ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮ ನವೆಂಬರ್ 16 ರಂದು ಅರಮನೆ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ.

ನವೆಂಬರ್ 16 ರಂದು ಅರಮನೆ ಮೈದಾನದಲ್ಲಿ ನಡೆಯಬೇಕಿದ್ದ ಬಿಜೆಪಿ ಕಾರ್ಯಕರ್ತರ ಬೃಹತ್ ಸಭೆ ಮುಂದೂಡಲಾಗಿದೆ.ನವೆಂಬರ್ ಅಂತ್ಯದವರೆಗೆ ಐದು ರಾಜ್ಯಗಳ ವಿಧಾನ ಸಭಾ ಚುನಾವಣೆ ನಡೆಯಲಿವೆ.ಹಾಗಾಗಿ ಕೇಂದ್ರ ನಾಯಕರು ಪ್ರಚಾರದಲ್ಲಿ ಬಿಜಿಯಾಗಿದ್ದಾರೆ.ನವೆಂಬರ್ 16 ರಂದು ಕಾರ್ಯಕ್ರಮ ನಡೆಸಿದರೆ ಕೇಂದ್ರ ನಾಯಕರು ಬರುವುದಿಲ್ಲ.ಹಾಗಾಗಿ ನವೆಂಬರ್ 23 ರ ನಂತರ ಕಾರ್ಯಕರ್ತರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

ಇನ್ನು ಈ ಪದಗ್ರಹ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಇತರ ರಾಜ್ಯದ ಮುಖಂಡರು ಭಾಗವಹಿಸಲಿದ್ದಾರೆ.

Related