ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ಭಾನುವಾರ ಸಂಜೆ ನಡೆದ ಏಕದಿನದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತದ ಆಟಗಾರ ವಿರಾಟ್ ಕೊಹ್ಲಿ ಅವರು ಶತಕ ಬಾರಿಸುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.
ಹೌದು, ಟೀಮ್ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಭಾರತಕ್ಕೆ ಜಯಭೇರಿ ಸಿಗುವಂತೆ ಮಾಡಿದ್ದಾರೆ.
ಇನ್ನು ಶತಕ ಬಾರಿಸುವ ಮೂಲಕ 14000 ರನ್ ಪೂರೈಸುವ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ಸೃಷ್ಟಿಸಿದ್ದಾರೆ.
ಪ್ರಸ್ತುತ ಕಾಲದ ಅತ್ಯುತ್ತಮ ಏಕದಿನ ಬ್ಯಾಟರ್ಗಳಲ್ಲಿ ವಿರಾಟ್ ಕೊಹ್ಲಿ ಒಬ್ಬರು. ಇವರು ಟೀಮ್ ಇಂಡಿಯಾ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಮತ್ತು ಶ್ರೀಲಂಕಾ ಮಾಜಿ ಕ್ಯಾಪ್ಟನ್ ಕುಮಾರ್ ಸಂಗಕ್ಕಾರ ಅವರಿಂದ ಸಾಧ್ಯವಾಗದ ಸಾಧನೆಯನ್ನು ಮಾಡಿದ್ದಾರೆ. ಇದನ್ನೂ ಓದಿ:
ಕಿಂಗ್ ವಿರಾಟ್ ಕೊಹ್ಲಿ ಅವರು, ಚಾಂಪಿಯನ್ ಟ್ರೋಫಿಯಲ್ಲಿ 2 ವಿಶೇಷ ದಾಖಲೆ ಬರೆದಿದ್ದಾರೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 158 ಕ್ಯಾಚ್ಗಳನ್ನು ಪಡೆಯುವ ಮೂಲಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಫೀಲ್ಡರ್ ದಾಖಲೆ ಬರೆದರು
47ನೇ ಓವರ್ನಲ್ಲಿ ಕುಲದೀಪ್ ಯಾದವ್ ಅವರ ಬೌಲಿಂಗ್ ನಲ್ಲಿ ನಸೀಮ್ ಶಾ ಅವರ ಕ್ಯಾಚ್ ಪಡೆಯುವ ಮೂಲಕ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.
