ಕೊಡಗಿಗೆ ಸಿದ್ದು ಭೇಟಿ

ಕೊಡಗಿಗೆ ಸಿದ್ದು ಭೇಟಿ

ಕೊಡಗು: ರಾಜ್ಯದಲ್ಲಿ ಬಿಟ್ಟುಬಿಡದೆ ಸುರಿದ ಮಳೆಯಿಂದಾಗಿ ಮಲೆನಾಡಿನ ಪ್ರದೇಶದಲ್ಲಿ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಮಳೆಯಿಂದಾಗಿ ಕೊಡಗಿನ ಮೊಣಂಗೇರಿ ಗ್ರಾಮದಲ್ಲಿ ಭೂ ಕುಸಿತ ಸಂಭವಿಸಿದ.

ಇಂದು ಸಿದ್ದರಾಮಯ್ಯ ಅವರು ಕೊಡಗಿನ ಮೊಣಂಗೇರಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು. ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗಿನ ಮಳೆನಾಡು ಪ್ರದೇಶಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿ ಅವರಿಗೆ ಧೈರ್ಯ ಹೇಳಿದರು.‌

ಇನ್ನು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಸಚಿವರಾದ ಜೀವಿಜಯ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ, ಪಕ್ಷದ ಜಿಲ್ಲಾ ಉಸ್ತುವಾರಿ ಲಕ್ಷ್ಮಣ್, ಮಾಜಿ ಶಾಸಕರಾದ ವೀಣಾ ಅಚ್ಚಯ್ಯ ಮತ್ತಿತರರು ಹಾಜರಿದ್ದರು.

Related