ಬೆಂಗಳೂರು ನಗರ ವ್ಯಾಪ್ತಿಯಲ್ಲಿ 97,15,109 ಮತದಾರರು

ಬೆಂಗಳೂರು ನಗರ ವ್ಯಾಪ್ತಿಯಲ್ಲಿ 97,15,109 ಮತದಾರರು

ಬೆಂಗಳೂರು: ಜಿಲ್ಲಾ ಚುನಾವಣಾ ಅಧಿಕಾರಿ-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 97,15,109 ಮತದಾರರಿದ್ದು, ಈ ಪೈಕಿ 50,24,775 ಪುರುಷ, 46,86,813 ಮಹಿಳೆ, 1,761 ಇತರೆ, 1,760 ಸೇವಾ ಮತದಾರರಿದ್ದಾರೆ.

ನಗರದಲ್ಲಿ1,43,526 ಯುವ ಮತದಾರಿದ್ದು, ಈ ಬಾರಿ ಯುವ ಮತದಾರರ ಸಂಖ್ಯೆ ಹೆಚ್ಚಾಗಿದೆ.

80+ ವಯಸ್ಸಿನ ಮತದಾರರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 29 ರಿಂದ ಮೇ 6ನೇ ತಾರೀಖಿನವರೆಗೂ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಚುನಾವಣಾಧಿಕಾರಿಗಳ ಮುಖಾಂತರ ವ್ಯವಸ್ಥೆ ಕಲ್ಪಿಸಲಾಗಿದೆ.

ಮುಖ್ಯ ಚುನಾವಣಾಧಿಕಾರಿಯವರ ಸುತ್ತೋಲೆಯಂತೆ ಏಪ್ರಿಲ್ 30 ರಂದು ‘ನಮ್ಮ ನಡೆ ಮತಗಟ್ಟೆಯ ಕಡೆ’ ಜಾಗೃತಿ ಕಾರ್ಯಕ್ರಮ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಅಂಗವಾಗಿ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಅಂಗವಾಗಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಏಕ ಕಾಲಕ್ಕೆ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಹಮ್ಮಿಕೊಳ್ಳಲು ಚುನಾವಣಾ ಆಯೋಗದ  ಸುತ್ತೋಲೆಯಂತೆ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಪ್ರಸ್ತುತ ಚುನಾವಣೆಯ ಮತದಾನ ಮೇ 10 ರಂದು ನಡೆಯಲಿದ್ದು, ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮವನ್ನು ಏಪ್ರಿಲ್ 30 ರಂದು ಬೆಳಗ್ಗೆ 8:00 ಗಂಟೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಏಕ ಕಾಲದಲ್ಲಿ ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದ್ದು, ಪ್ರಾಥಮಿಕವಾಗಿ ಮತಗಟ್ಟೆ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ನೇತೃತ್ವದಲ್ಲಿ, ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರು ನಗರ ಜಿಲ್ಲೆಯಾದ್ಯಾಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗುತ್ತದೆ ಎಂದು ತಿಳಿದು ಬಂದಿದೆ.

 

Related