ಹೋಟೆಲ್‌ ದರ ಏರಿಕೆ ಖಂಡಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ಹೋಟೆಲ್‌ ದರ ಏರಿಕೆ ಖಂಡಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 15 ದಿನಗಳಿಂದ ತರಕಾರಿಯಿಂದ ಹಿಡಿದು ದಿನಬಳಕೆ ವಸ್ತುಗಳ ಬೆಲೆ ಗಗನ ಕೇಳುತ್ತಿರುವುದರಿಂದ ಸಾಮಾನ್ಯ ಜನರು ಜೀವನ ನಡೆಸಿದು ತುಂಬಾ ಕಷ್ಟಕರವಾಗುತ್ತಿದೆ ಎಂದು ವಾಟಾಳ್ ನಾಗರಾಜ್ ಅವರು ತಿಳಿಸಿದ್ದಾರೆ.

ಇನ್ನು ಇದರ ಬೆನ್ನಲ್ಲೇ ಇದೀಗ ಹೋಟೆಲ್‌ಗಳಲ್ಲಿ ಊಟ, ತಿಂಡಿಗಳ ಬೆಲೆಯನ್ನು ಏರಿಸುವ ಮೂಲಕ ಗ್ರಾಹಕರಿ ಶಾಕ್‌ ನೀಡಲಾಗಿದೆ. ಇನ್ನು ಹೋಟೆಲ್‌ ದರ ಏರಿಕೆ ಖಂಡಿಸಿ ವಾಟಾಳ್ ನಾಗರಾಜ್ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಹೋಟೆಲ್‌ಗಳಲ್ಲಿ ಊಟ, ತಿಂಡಿಗಳ ಬೆಲೆ ಏರಿಕೆ ಮಾಡಿರುವುದು ಖಂಡನೀಯವಾಗಿದೆ. ಇದರಿಂದ ಜನರಿಗೆ ತುಂಬಾ ಕಷ್ಟ ಆಗುತ್ತಿದೆ. ಆದ್ದರಿಂದ ನಾವು ಇಂದು 1 ರೂಪಾಯಿಗೆ ಮುದ್ದೆ ಮಾರುವ ಮೂಲಕ ವಿನೂತನ ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.

ತರಕಾರಿ, ಹೋಟೆಲ್‌ ಫುಡ್‌ ಸೇರಿದಂತೆ ಎಣ್ಣೆ ಬೆಲೆ ಜಾಸ್ತಿಯಾಗುಲೇ ಇದ್ದು, ಇದರಿಂದ ಜನಸಾಮಾನ್ಯರು ತುಂಬಾ ತೊಂದರೆ ಅನುಭವಿಸುವಂತಾಗಿದೆ. ಹಾಗೆಯೇ ಸೂಪರ್‌ಸ್ಟಾರ್ ಎಂಬ ಮದ್ಯಪಾನ ಪ್ರಿಯರೊಬ್ಬರು ನಮ್ಮಿಂದಲೇ ಸರ್ಕಾರ ನಡೆಯುತ್ತಿದೆ. ಆದರೆ ಎಣ್ಣೆ ದರ ಜಾಸ್ತಿ ಮಾಡಿ ನಮಗೇ ಅನ್ಯಾಯ ಮಾಡಿದ್ದಾರೆ. ನಮಗಾಗಿಯೂ ಪ್ರತಿಭಟನೆ ಮಾಡಿ ಅಂತಾ ನನ್ನ ಬಳಿ ಅಳಲು ತೋಡಿಕೊಂಡಿದ್ದರು. ಹೀಗಾಗಿ ಮದ್ಯ ಪ್ರಿಯರಿಗಾಗಿ ಮುಂದಿನ ವಾರ ಪ್ರತಿಭಟನೆ ಮಾಡುತ್ತೇನೆ ಎಂದರು.

 

Related