ಬೆಂಗಳೂರು ಕೆರೆಗಳಿಗೆ ನದಿ ನೀರು

ಬೆಂಗಳೂರು ಕೆರೆಗಳಿಗೆ ನದಿ ನೀರು

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಜಲಮೂಲಗಳನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ಎಲ್ಲ ಕೆರೆಗಳನ್ನು ಅಭಿವೃದ್ಧಿ ಮಾಡಲಾಗುವುದು ಹಾಗೂ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಗುರುವಾರ ಗಾಂಧಿನಗರದಲ್ಲಿ ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತ ಕೊಟ್ಟು ಐದು ವರ್ಷಗಳ ಸರಕಾರ ರಚನೆ ಮಾಡಲು ಜನರು ಬೆಂಬಲ ನೀಡಿದರೆ, ನೀರಿನ ವಿಷಯದಲ್ಲಿ ಬೆಂಗಳೂರು ಜನರು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಘೋಷಣೆ ಮಾಡಿದರು.

ದೇವೇಗೌಡರು ಅಧಿಕಾರದಲ್ಲಿ ಇದ್ದಾಗ ರಾಜ್ಯಕ್ಕೆ ಅನೇಕ ನೀರಾವರಿ ಯೋಜನೆ ಕೊಟ್ಟಿದ್ದಾರೆ. ಅದರಲ್ಲೂ ಬೆಂಗಳೂರಿಗೆ ಅನೇಕ ಕಾರ್ಯಕ್ರಮ ಕೊಟ್ಟಿದ್ದಾರೆ. ಕಾವೇರಿ ನದಿಯಿಂದ ೯ ಟಿಎಂಸಿ ನೀರು ಸಿಕ್ಕಿದ್ದು ದೇವೇಗೌಡರು ಪ್ರಧಾನಿಯಾಗಿ ಮಾಡಿದ ಒಂದು ಆದೇಶ ಕಾರಣ. ಇವತ್ತು ನಗರದ ಜನ ಕಾವೇರಿ ನೀರು ಕುಡಿಯುತ್ತಿದ್ದರೆ ಅದಕ್ಕೆ ಕಾರಣ ಗೌಡರು ಎಂದು ಕುಮಾರಸ್ವಾಮಿ ಹೇಳಿದರು.

Related