ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ನಾವು ಬದ್ಧ: ಡಿಸಿಎಂ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ನಾವು ಬದ್ಧ: ಡಿಸಿಎಂ

ಬೆಳಗಾವಿ: ರಾಜ್ಯದಲ್ಲಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ನೀರಿನ ಪೂರೈಕೆ ಮತ್ತು ವಿದ್ಯುತ್ ಉತ್ಪಾದನೆ ಮಾಡುತ್ತಿರುವ ಮೇಕೆದಾಟು ಯೋಜನೆಗೆ ನಮ್ಮ ಸರ್ಕಾರ ಅನುಷ್ಠಾನ ಮಾಡಲು ಬದ್ಧವಿದೆ ಆದರೆ ನಮ್ಮ ಯೋಜನೆಗೆ ಕೇಂದ್ರ ಸರ್ಕಾರ ಕೈಜೋಡಿಸಿದರೆ ನಾವು ಮೇಕೆದಾಟು ಯೋಜನೆಯನ್ನು ಆದಷ್ಟು ಬೇಗ ಮಾಡಿ ಮುಗಿಸಬಹುದೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನ ಪರಿಷತ್ತಿನಲ್ಲಿ ಮನವಿ ಮಾಡಿದ್ದಾರೆ.

ಬಿಜೆಪಿ ಸದಸ್ಯ ಎನ್. ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ನೀರು, ನಮ್ಮ ಹಕ್ಕು. ನಿಮ್ಮ ನೀರು, ನಿಮ್ಮ ಹಕ್ಕು ಎಂಬ ತತ್ವದ ಮೇಲೆ ಹೋರಾಟ ಮಾಡೋಣ. ಯೋಜನೆ ಅನುಷ್ಠಾನವಾಗುವುದರಿಂದ ತಮಿಳುನಾಡಿಗೆ ನಮಗಿಂತಲೂ ಹೆಚ್ಚಿನ ಅನುಕೂಲವಾಗಲಿದೆ. ನಮಗೆ 400 ಮೆ.ವ್ಯಾ. ವಿದ್ಯುತ್ ಉತ್ಪಾದನೆಗೆ ಅವಕಾಶ ಸಿಕ್ಕರೆ, ಅವರಿಗೆ ಇನ್ನೂ ಹೆಚ್ಚಿನ ಕುಡಿಯುವ ನೀರಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

 

Related