ನಾವೇ ಖುದ್ದಾಗಿ ನಿಮ್ಮ ಬಳಿ ಬಂದು ನಿಮ್ಮ ಸಮಸ್ಯೆಗಳನ್ನು ಆಲಿಸುತ್ತಿದ್ದೇವೆ: ಡಿಸಿಎಂ

ನಾವೇ ಖುದ್ದಾಗಿ ನಿಮ್ಮ ಬಳಿ ಬಂದು ನಿಮ್ಮ ಸಮಸ್ಯೆಗಳನ್ನು ಆಲಿಸುತ್ತಿದ್ದೇವೆ: ಡಿಸಿಎಂ

ಬೆಂಗಳೂರು: ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮವನ್ನು ಇಂದು ಬೊಮ್ಮನಹಳ್ಳಿ ವಲಯದಲ್ಲಿ ಹಮ್ಮಿಕೊಳಾಗಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಾರ್ವಜನಿಕರ ಅಳಲನ್ನು ಆಲಿಸಿ ಅವರ ಕುಂದುಕೊರತೆಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ನೀಡುವುದಾಗಿ ಹೇಳಿದ್ದಾರೆ.

ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾನ್ಯವಾಗಿ ಎಲ್ಲೂ ನ್ಯಾಯ ಸಿಗದಿರುವಾಗ ಅಧಿಕಾರಿಗಳ ಬಳಿ ಹೋಗಿ ತಮ್ಮ ಅಳಲನ್ನು ತೋಡಿಕೊಳ್ಳುತ್ತಾರೆ. ಆದರೆ ಅಧಿಕಾರಿಗಳು ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸದೆ ಸಾರ್ವಜನಿಕರು ತಿರುಗಾಡಿ ತಿರುಗಾಡಿ ಸುಸ್ತಾಗಿ ಹೋಗಿರುತ್ತಾರೆ.

ಈ ತರಹದ ತೊಂದರೆಯಾಗುತ್ತಿರುವುದರಿಂದ ನಾವೇ ಖುದ್ದಾಗಿ ನಿಮ್ಮ ಬಳಿ ಬಂದು ನಿಮ್ಮ ಸಮಸ್ಯೆಗಳನ್ನು ಆಲಿಸುತ್ತಿದ್ದೇವೆ. ಎಷ್ಟರ ಮಟ್ಟಿಗೆ ನ್ಯಾಯ ಬದ್ಧತೆಯ ಬೇಡಿಕೆಗಳಿವೆ ಆ ಎಲ್ಲಾ ಬೇಡಿಕೆಗಳನ್ನು ನಾವು ಈ ಜನಸ್ಪಂದನ ಕಾರ್ಯಕ್ರಮದಲ್ಲಿ ಈಡೇರಿಸುತ್ತೇವೆ ಎಂದು ಹೇಳಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ರಾಜ್ಯದ ಮಂತ್ರಿಯಾಗಿ ನಾನೇ ಸಾರ್ವಜನಿಕರ ಕ್ಷೇತ್ರಗಳಿಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ನಾವು ತೀರ್ಮಾನ ಮಾಡಿದ್ದೇವೆ. ಏನೇ ಸಮಸ್ಯೆ ಇದ್ದರೂ ನಮ್ಮ ಹತ್ತಿರ ಬಂದು ಹೇಳಿಕೊಳ್ಳಬಹುದು. ಸಾಧ್ಯವಾದಷ್ಟು ನಾವು ಆ ಸಮಸ್ಯೆಯನ್ನು ಪರಿಹರಿಸಿಕೊಡುತ್ತೇವೆ ಎಂದರು.

ಈಗಾಗಲೇ ಈ ಜನ ಸ್ಪಂದನ ಕಾರ್ಯಕ್ರಮವನ್ನು ಮಹದೇವಪುರ, ಕೆಆರ್ ಪುರಂ, ಯಶವಂತಪುರ, ಯೆಲಹಂಕ, ಬ್ಯಾಟರಾಯನಪುರ, ದಾಸರಹಳ್ಳಿ, ಶಿವಾಜಿನಗರ ಈ ಎಲ್ಲಾ ಸ್ಥಳಗಳಲ್ಲಿ ನಾವು ಜನಸ್ಪಂದನ ಕಾರ್ಯಕ್ರಮವನ್ನು ಮುಗಿಸಿದ್ದೇವೆ. ಅಲ್ಲಿ ಸಾರ್ವಜನಿಕರು ತಮ್ಮ ಅಳಲನ್ನು ನಮ್ಮ ಮುಂದೆ ತೋಡಿಕೊಂಡಿದ್ದಾರೆ.

ಇಂದು ಬೊಮ್ಮನಹಳ್ಳಿ ವಲಯದಲ್ಲಿ ಜನಸ್ಪಂದನವನ್ನು ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ ಈ ತಿಂಗಳೊಳಗೆ ಬೆಂಗಳೂರು ನಗರದಲ್ಲಿರುವ ಜನರ ಸಮಸ್ಯೆಗಳನ್ನು ಬಗೆಹರಿಸುವ ವ್ಯವಸ್ಥೆಯನ್ನು ನಾವು ಮಾಡಿಕೊಂಡಿದ್ದೇವೆ. ಇಲ್ಲಿ ನೆರೆದಿರುವಂತಹ ಜನರು ತಮ್ಮ ಸಮಸ್ಯೆಗಳನ್ನು ನಮಗೆ ತಿಳಿಸಿದರೆ ನಾವು ನಿಮ್ಮನ್ನು ಭೇಟಿ ನೀಡಿ, ನಿಮ್ಮ ಸಮಸ್ಯೆಗಳನ್ನು ನಾವು ಬಗೆಹರಿಸುತ್ತೇವೆ ಎಂದರು.

Related