ಎಚ್ ಡಿ ರೇವಣ್ಣ ಅವರಿಗೆ ಮತ್ತೊಂದು ನೋಟಿಸ್ ನೀಡಿದ್ದೇವೆ: ಗೃಹ ಸಚಿವ

ಎಚ್ ಡಿ ರೇವಣ್ಣ ಅವರಿಗೆ ಮತ್ತೊಂದು ನೋಟಿಸ್ ನೀಡಿದ್ದೇವೆ: ಗೃಹ ಸಚಿವ

ಬೆಂಗಳೂರು: ಪೆನ್ ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ನೋಟಿಸ್ ಜಾರಿ ಮಾಡಿದ್ದರು ಕೂಡ ಅವರು ವಿಚಾರಣೆಗೆ ಹಾಜರಾಗತ್ತಿದ್ದ ಕಾರಣ ಎಸ್ಐಟಿ ಅಧಿಕಾರಿಗಳು ಇಲ್ಲ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಲುಕ್ ನೋಟಿಸ್ ನೀಡಿದ್ದಾರೆ.

ಇನ್ನು ಪ್ರಜ್ವಲ್ ರೇವಣ್ಣ ಅವರ ಅಡ್ವಕೇಟ್ ಆರು ದಿನಗಳು ಕಾಲಾವಕಾಶ ಕೊಡಿ ಎಂದು ನಮಗೆ ಪತ್ರ ಬರೆದಿದ್ದಾರೆ. ಆದರೆ ಕಾನೂನು ಪ್ರಕಾರದಲ್ಲಿ ಸಮಯಾವಕಾಶ ಕೊಡಲು ಆಗುವುದಿಲ್ಲವೆಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೋಟಿಸಿಗೆ ಅವರು ಸ್ಪಂದಿಸದೆ ಹೋದರೆ ಕಾನೂನು ರೀತಿಯಲ್ಲಿ ನಾವು ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ತಲೆಮರಿಸಿಕೊಂಡಿದ್ದರು ಹಿಡಿದು ತರುತ್ತೇವೆ: ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬರೆದಿರುವ ಪತ್ರ ಬರೆದಿರುವ ಸಂಗತಿಯನ್ನು ಸಹ ಪರಮೇಶ್ವರ್ ಹೇಳಿದರು. ಹೆಚ್ ಡಿ ರೇವಣ್ಣ ಆರೋಪಿ ನಂಬರ್ ವನ್  ಆಗಿದ್ದು, ಅವರಿಗೂ 41/ಎ ಅಡಿ ನೋಟೀಸ್ ಜಾರಿಮಾಡಲಾಗಿದೆ, ಅವರು ಮೊದಲ ನೋಟೀಸ್ ಗೆ ಪ್ರತಿಕ್ರಿಯೆ ನೀಡದ ಕಾರಣ ಎರಡನೇ ನೋಟೀಸ್ ಜಾರಿ ಮಾಡಲಾಗಿದ್ದು ಇದಕ್ಕೂ ಪ್ರತಿಕ್ರಿಯಿಸಲು 24 ಗಂಟೆಗಳ ಕಾಲಾವಕಾಶವಿರುತ್ತದೆ, ಅವರು ಹಾಜರಾಗದ ಸಂದರ್ಭದಲ್ಲಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದರು.

Related