ಮೇಕೆದಾಟುವಿಗೆ ಕೇಂದ್ರದಿಂದ ಅನುಮತಿ ಕೊಡಿಸುತ್ತೇವೆ: ತೇಜಸ್ವಿ ಸೂರ್ಯ

ಮೇಕೆದಾಟುವಿಗೆ ಕೇಂದ್ರದಿಂದ ಅನುಮತಿ ಕೊಡಿಸುತ್ತೇವೆ: ತೇಜಸ್ವಿ ಸೂರ್ಯ

ಬೆಂಗಳೂರು: ಮೇಕೆದಾಟು ಯೋಜನೆಯು ನಮ್ಮ ಕರ್ನಾಟಕ ರಾಜ್ಯದ ಅದರಲ್ಲೂ ಬೆಂಗಳೂರಿ ನಗರಕ್ಕೆ ಕುಡಿಯುವ ನೀರಿನ ವ್ಯವಸ್ಥೆಯಾಗುವುದು ಹಾಗಾಗಿ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಸರ್ಕಾರವು ಎನ್​​ಒಸಿ ಪಡೆಯಲಿ ಎಂದು ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ನಮ್ಮ ಕರ್ನಾಟಕ ರಾಜ್ಯಕ್ಕೆ ಬಹಳ ಉಪಯೋಗ ವಾಗುತ್ತದೆ ಆದ್ದರಿಂದ ಕೇಂದ್ರ ಸರ್ಕಾರಕ್ಕೆ ನಾನು ಕೂಡ ಮೇಕೆದಾಟಿನ ವಿಷಯದ ಬಗ್ಗೆ ಮನವಿ ಮಾಡುತ್ತೇನೆ ಎಂದು ಹೇಳಿದರು.

ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಸದಸ್ಯ ಪಕ್ಷವಾಗಿರುವ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಕಾಂಗ್ರೆಸ್​ ಪಕ್ಷದ ಸ್ನೇಹಿತರಾಗಿರುವ ಸ್ಟಾಲಿನ್ ಬಳಿ ಮೇಕೆದಾಟು ಯೋಜನೆಗೆ ಎನ್​ಒಸಿ ಒದಗಿಸಿಕೊಡಲಿ ಎಂದು ಸೂರ್ಯ ಹೇಳಿದ್ದಾರೆ.

ಮೇಕೆದಾಟು ಅಣೆಕಟ್ಟೆ ನಿರ್ಮಾಣವು ಮುಖ್ಯವಾಗಿ ಕುಡಿಯುವ ನೀರಿನ ಯೋಜನೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಿಂದ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆಯ ಅಗತ್ಯವನ್ನು ಪೂರೈಸುವುದಕ್ಕಾಗಿ ಕರ್ನಾಟಕ ಸರ್ಕಾರ ಈ ಯೋಜನೆ ಹಮ್ಮಿಕೊಂಡಿದೆ.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ತಮಿಳುನಾಡು ಸರ್ಕಾರದಿಂದ ಮೇಕೆದಾಟು ಯೋಜನೆಗೆ ಎನ್​​ಒಸಿ ಪಡೆಯಲಿ. ‘ಇಂಡಿಯಾ’ ಬ್ಲಾಕ್ ಅಡಿಯಲ್ಲಿ ಕಾಂಗ್ರೆಸ್ ಹಗೂ ಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ, ಅದರಿಂದ ಸ್ವಲ್ಪ ಸುಲಭವಾಗಬಹುದು. ಹಾಗೆ ಮಾಡಿದರೆ, ಕೇಂದ್ರ ಸರ್ಕಾರದಿಂದ ನಾವು ಯೋಜನೆಗೆ ಅನುಮತಿ ಪಡೆಯುತ್ತೇವೆ ಎಂದು ನಾನು ಭರವಸೆ ನೀಡುತ್ತೇನೆ ಎಂದು ಸೂರ್ಯ ಹೇಳಿದ್ದಾರೆ. ಕನ್ನಡ ಮಾಧ್ಯಮವೊಂದರ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಸೂರ್ಯ ಈ ರೀತಿ ಉತ್ತರಿಸಿದ್ದಾರೆ.

 

Related