ತುಮಕೂರು ನಗರಕ್ಕೆ ಮೆಟ್ರೋ ಸಂಚಾರದ ಬಗ್ಗೆ ಸಿಎಂ ಗೆ ಮನವಿ ಮಾಡಿದ್ದೇವೆ: ಪರಮೇಶ್ವರ್

ತುಮಕೂರು ನಗರಕ್ಕೆ ಮೆಟ್ರೋ ಸಂಚಾರದ ಬಗ್ಗೆ ಸಿಎಂ ಗೆ ಮನವಿ ಮಾಡಿದ್ದೇವೆ: ಪರಮೇಶ್ವರ್

ತುಮಕೂರು: ಬೆಂಗಳೂರು ಸಮೀಪದಲ್ಲಿರುವ ತುಮಕೂರು ನಗರಕ್ಕೂ ಕೂಡ ಮೆಟ್ರೋ ಸಂಚಾರಕ್ಕೆ ನಾವು ಈಗಾಗಲೇ ಮನವಿ ಮಾಡಿದ್ದೇವೆ ಎಂದು ಗೃಹ ಸಚಿವ ಡಿ ಪರಮೇಶ್ವರ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ತುಮಕೂರು ನಗರ ಅಭಿವೃದ್ಧಿಗೆ ಮೆಟ್ರೋ ರೈಲು ಯೋಜನೆಗೆ ಸಿಎಂ ಮತ್ತು ಡಿಸಿಎಂಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಇನ್ನುಇದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಬೇಕು. ಕೇಂದ್ರ ಸರ್ಕಾರದ ಅನುಮತಿ ಬೇಕು. ಪಿಪಿಪಿ ಬಂಡಾವಾಳ ಹೂಡಿಕೆಗೆ ಸಜ್ಜಾದಾಗ ಅನುಮತಿ ಬೇಕು ಎಂದು ತಿಳಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಆರು ವಾರ್ಡ್‌ಗಳು ಮಾತ್ರ ಸ್ಮಾರ್ಟ್ ಆಗಿವೆ. ಇನ್ನು 29 ಬಾಕಿ ಇವೆ. ಇವುಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕಾಗಿ ಮುಖ್ಯಮಂತ್ರಿಗೆ ಒತ್ತಾಯಿಸಲಾಗುವುದು.

ತುಮಕೂರು ನಗರದ ವಾರ್ಡ್‌ಗಳ ಅಭಿವೃದ್ಧಿಗೆ ಮಾತ್ರ 500. ಕೋಟಿ ರು. ಕೇಳಲಾಗುವುದು ಎಂದರು.  ಜಿಲ್ಲೆಯ ಒಂದು ಸಾವಿರ ಶಾಲೆಗಳಿಗೆ ಕಾಂಪೌಂಡ್, ಶೌಚಾಲಯ, ಆಟದ ಮೈದಾನ ಸೇರಿದಂತೆ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ನೀಡಲು 85 ಕೋಟಿ ರೂ. ಅನುದಾನ ಖರ್ಚು ಮಾಡಲಾಗುತ್ತಿದೆ. ಕೆಲ ಶಾಲೆಗಳ ಅಭಿವೃದ್ಧಿ ಕಾರ್ಯ ಮುಗಿಯುತ್ತ ಬಂದಿದೆ. ಸುಸಜ್ಜಿತ ಸೌಲಭ್ಯ ಕಲ್ಪಿಸಲಾಗಿದೆ. ವಿಜ್ಞಾನ, ತಾಂತ್ರಿಕ ಪದವಧರ ಕೋರ್ಸ್‌ಗಳಾದ, ಸೈಬರ್ ಕ್ರೈಂ, ಆರ್ಥಿಕ ಪದವಿಗಳನ್ನು ಪ್ರಾರಂಭಿಸಲು ಹೆಚ್ಚು ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು.

 

Related