ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಬೇಕು ಡಿ.ಕೆ.ಶಿ

ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಬೇಕು ಡಿ.ಕೆ.ಶಿ

ದೆಹಲಿ: ರಾಜ್ಯದಲ್ಲಿ ಸಿಎಂ ಪಟ್ಟ ಆಯ್ಕೆ ಬಿಕ್ಕಟ್ಟಿನಲ್ಲಿ ನಡೆದಿದ್ದು ಇಂದು ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಸಿಎಂ ಆಯ್ಕೆ ಪ್ರತಿಕ್ರಿಯೆ ಅಂತ್ಯಗೊಂಡಿದ್ದು ಸಿದ್ದರಾಮಯ್ಯ ಅವರೇ ಮುಂದಿನ 24ನೆಯ ಮುಖ್ಯಮಂತ್ರಿ ಆಗಿ ಅಧಿಕಾರವನ್ನು ಸ್ವೀಕರಿಸಲಿದ್ದಾರೆ ಎಂದು ಹೈಕಮಾಂಡ್ ನಿರ್ಧಾರ ತಿಳಿಸಿದೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕದ ಸುರಕ್ಷಿತ ಭವಿಷ್ಯ ಮತ್ತು ನಮ್ಮ ಜನರ ಕಲ್ಯಾಣ ನಮ್ಮ ಮೊದಲ ಆದ್ಯತೆಯಾಗಿದೆ. ಅದನ್ನು ಖಾತರಿಪಡಿಸುವಲ್ಲಿ ಒಗ್ಗಟ್ಟಾಗಿದ್ದೇವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.

ಸಿದ್ದರಾಮಯ್ಯ ಅವರನ್ನು ರಾಜ್ಯ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಎಐಸಿಸಿ ಆಯ್ಕೆ ಮಾಡಿರುವ ಬೆನ್ನಲ್ಲೇ ಡಿಕೆ.ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ಈ ನಡುವೆ ಡಿಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್’ನ ಅಧ್ಯಕ್ಷ ಶ್ರೀನಿವಾಸ್ ಬಿವಿಯವರು ನವದೆಹಲಿಯಲ್ಲಿ ಡಿಕೆ.ಶಿವಕುಮಾರ್ ಅವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆ.ಶಿವಕುಮಾರ್ ಅವರು, ಎಲ್ಲವೂ ಚೆನ್ನಾಗಿದೆ ಮತ್ತು ಚೆನ್ನಾಗಿರುತ್ತದೆ. ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಅದನ್ನು ಒಪ್ಪಿಕೊಂಡಿದ್ದೇವೆಂದು ಹೇಳಿದರು.

Related