ಷರತ್ತು ಇಲ್ಲದೆ ಪಕ್ಷಕ್ಕೆ ಬರುವವರಿಗೆ ನಮ್ಮ ಸ್ವಾಗತ; ಡಿಸಿಎಂ

ಷರತ್ತು ಇಲ್ಲದೆ ಪಕ್ಷಕ್ಕೆ ಬರುವವರಿಗೆ ನಮ್ಮ ಸ್ವಾಗತ; ಡಿಸಿಎಂ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಬಿಜೆಪಿ ಪಕ್ಷಕ್ಕೆ ಆಘಾತಗಳ ಮೇಲೆ ಆಘಾತ ಉಂಟಾಗುತ್ತಿದೆ.

ಹೌದು, ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಅದರಂತೆ ಇಂದು ಕಲಬುರ್ಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಮಲದೊರೆದು ಕೈ ಹಿಡಿದಿದ್ದಾರೆ.

ಬಳಿಕ ಮಾತನಾಡಿದ ಮಾಲೀಕಯ್ಯ ಗುತ್ತೇದಾರ, ಬಿಜೆಪಿ ಪಕ್ಷದಲ್ಲಿ ನನ್ನನ್ನು ಬಹಳ ಕಿಲಾಗಿ ನೋಡಿಕೊಂಡಿದ್ದಾರೆ ಹಾಗಾಗಿ ನನಗೆ ಬಹಳ ನೋವಾಗಿದೆ ಎಂದು ಹೇಳಿದರು. ಹಿಂದುಳಿದ ವರ್ಗದವನನ್ನು ಹೇಗೆ ನಡೆಸಿಕೊಳ್ಳುತ್ತಾರೆಂಬ ಅನುಭವ ಆಗಿದೆ. ಎಂ.ವೈ.ಪಾಟೀಲ್ ಕೂಡ ಕಾಂಗ್ರೆಸ್​ಗೆ ಬರ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ರಾಜ್ಯದ ಉದ್ದಗಲಕ್ಕೂ ಬಿಜೆಪಿ, ಜೆಡಿಎಸ್​ ತೊರೆದು ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿಯವರಿಗೆ ಧ್ವನಿ ಇಲ್ಲ, ಧ್ವನಿ ಕಳೆದುಕೊಂಡಿದ್ದಾರೆ. ಷರತ್ತು ಇಲ್ಲದೆ ಪಕ್ಷಕ್ಕೆ ಬರುವವರಿಗೆ ನಮ್ಮ ಸ್ವಾಗತ. ಸ್ಥಳೀಯ ಮಟ್ಟದಲ್ಲಿ ಯಾರು ಬೇಕಾದರೂ ಬರಬಹುದು. ಜೆಡಿಎಸ್ ಸಿದ್ಧಾಂತ ಬದಲಾಗುತ್ತಿದೆ. ಅದಕ್ಕಾಗಿ ಹಲವು ನಾಯಕರು ಕಾಂಗ್ರೆಸ್​ಗೆ ಬರುತ್ತಿದ್ದಾರೆ ಎಂದು ಹೇಳಿದರು.

 

Related