ನಾವು ಬಿಜೆಪಿ ಬಿಟ್ಟು ಯಾರು ಹೋಗುವುದಿಲ್ಲ: ಕಾರಜೋಳ

ನಾವು ಬಿಜೆಪಿ ಬಿಟ್ಟು ಯಾರು ಹೋಗುವುದಿಲ್ಲ: ಕಾರಜೋಳ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಈಗಾಗಲೇ ಸುದ್ದಿ ಹರಿದಾಡುತ್ತಿದ್ದು, ಯಾರೆಲ್ಲಾ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ಕುತೂಹಲ ಮೂಡಿಸಿದೆ.

ಇನ್ನು ಇದರ ಬಗ್ಗೆ ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ ಅವರು, ಬಿಜೆಪಿ ಬಿಟ್ಟು ಯಾರು ಹೋಗುವುದಿಲ್ಲ. ಪಕ್ಷ ಬಿಟ್ಟು ಹೋಗುತ್ತೇವೆ ಎಂದು ಯಾರೂ ನಿಖರವಾಗಿ ಹೇಳಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ‌ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಮೂರು ತಿಂಗಳಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರಾತ್ರಿ ಕಂಡ ಬಾವಿಗೆ ಹಗಲಿನಲ್ಲಿ ಯಾರೂ ಬೀಳುವುದಿಲ್ಲ. ಈ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಕಾರಜೋಳ ವಾಗ್ದಾಳಿ ಮಾಡಿದರು.

 

Related