ಶೀಘ್ರದಲ್ಲೇ ಜನರ ಜನರ ಸಮಸ್ಯೆ ಬಗೆಹರಿಸುತ್ತೇವೆ: ಡಿಕೆಶಿ

ಶೀಘ್ರದಲ್ಲೇ ಜನರ ಜನರ ಸಮಸ್ಯೆ ಬಗೆಹರಿಸುತ್ತೇವೆ: ಡಿಕೆಶಿ

ಚನ್ನಪಟ್ಟಣ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ʼಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರʼ ಎಂಬ ಕಾರ್ಯಕ್ರಮವನ್ನು ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಮಾಡುತ್ತಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ʼಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರʼ ಎಂಬ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ.

ಹೌದು ಇಂದು (ಬುಧವಾರ ಜುಲೈ 03) ರಂದು ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದ ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಇದನ್ನೂ ಓದಿ:ಪರಿಸರ ಸಂರಕ್ಷಣೆ ಎಲ್ಲರ ಹೊಣೆ: ಸಿಎಂ

ಇದಕ್ಕೂ ಮೊದಲು ಕಾರ್ಯಕ್ರಮದ ಉದ್ದೇಶಿಸಿ ಮಾತನಾಡದ ಅವರು, ಚನ್ನಪಟ್ಟಣ ಇತಿಹಾಸದಲ್ಲೇ ಇಂತಹ ಕಾರ್ಯಕ್ರಮ ನಡೆದಿಲ್ಲ, ಜನರ ಮನೆ ಬಾಗಿಲಿಗೇ ಸರ್ಕಾರ ಬಂದಿರೋದು ಇದೇ ಮೊದಲು. ಪ್ರತಿ ಜಿಲ್ಲೆಯಲ್ಲೂ ಜನಸ್ಪಂದನಾ ಕಾರ್ಯಕ್ರಮ ಕ್ಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದರು. ಅದರಂತೆ ಚನ್ನಪಟ್ಟಣದಲ್ಲಿ ನಾನು ವಿಶೇಷ ಆದ್ಯತೆ ನೀಡಿ ಕಾರ್ಯಕ್ರಮ ಮಾಡ್ತಿದ್ದೇನೆ. ಜನರ ಸಮಸ್ಯೆಗಳನ್ನ ಬಗೆಹರಿಸಿ ತೊಂದರೆ ತಪ್ಪಿಸಬೇಕು, ಅರ್ಜಿ ವಿಲೇವಾರಿಗೆ ಅಧಿಕಾರಿಗಳಿಗೆ ಟೈಂ ಪಿಕ್ಸ್ ಮಾಡ್ತಿದ್ದೀವಿ. ಶೀಘ್ರದಲ್ಲೇ ಜನರ ಜನರ ಸಮಸ್ಯೆ ಬಗೆಹರಿಸಲು ಕ್ರಮ ಎಂದು ಡಿಕೆಶಿ ಅಶ್ವಾಸನೆ ನೀಡಿದರು.

ಈ ಸಂದರ್ಭದಲ್ಲ ಶಾಸಕರಾದ ಉದಯ್, ಇಕ್ಬಾಲ್ ಹುಸೇನ್, ಎಂಎಲ್ಸಿಗಳಾದ ಪುಟ್ಟಣ್ಣ, ಎಸ್. ರವಿ, ಬೆಂಗಳೂರು-ಮೈಸೂರು ಇನಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನಾ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕರಾದ ಅಶ್ವಥ್, ರಾಜು, ಜಿಲ್ಲಾಧಿಕಾರಿ ಅವಿನಾಶ್ ಮೆನನ್, ಎಸ್ಪಿ ಕಾರ್ತಿಕ್ ರೆಡ್ಡಿ, ಮುಖಂಡರಾದ ವಿಜಯದೇವ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related