ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಧರಣಿ ನಡೆಸುತ್ತೇವೆ: ಸಿಎಂ

 ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಧರಣಿ ನಡೆಸುತ್ತೇವೆ: ಸಿಎಂ

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಈ ಬಾರಿ ಬಜೆಟ್ ಮಂಡಳಿಯಲ್ಲಿ ತುಂಬಾ ಅನ್ಯಾಯವಾಗಿದೆ ಹಾಗಾಗಿ ಇದೆ ಫೆಬ್ರುವರಿ 7ನೇ ತಾರೀಕು ಕರ್ನಾಟಕ ರಾಜ್ಯನೇ ದೆಹಲಿಯಲ್ಲಿ ಧರಣಿ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು.

ಅವರಿಂದ ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಜೆಟ್ ಮಂಡನೆಯಲ್ಲಿ ಬಹುದೊಡ್ಡ ಅನ್ಯಾಯ ಮಾಡಿದೆ ಹಾಗಾಗಿ ನಾವೆಲ್ಲರೂ ಧರಣಿ ಮಾಡಲು ಮುಂದಾಗಿದ್ದೇವೆ ಎಂದು ಹೇಳಿದರು.

ಈ ಬಾರಿ ಮಧ್ಯಂತರ ಬಜೆಟ್ ನಲ್ಲಿ ನಮ್ಮ ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ಹಣ ಬಿಡುಗಡೆ ಮಾಡುವ ಆಶ್ವಾಸವಿತ್ತು ಆದರೆ ನಮ್ಮ ಆಶ್ವಾಸಕ್ಕೆ ತಣ್ಣಿರಲಿದ್ದಾರೆ. ಈ ಕಾರಣಕ್ಕಾಗಿ ದೆಹಲಿಯ ಜಂತರ್​ ಮಂತರ್​​ನಲ್ಲಿ ಇಡೀ ಕರ್ನಾಟಕ ಸರ್ಕಾರ ಧರಣಿ ನಡೆಸಲಿದೆ ಎಂದು ಉಭಯ ನಾಯಕರು ತಿಳಿಸಿದರು.

ದೆಹಲಿಯಲ್ಲಿ ನಮ್ಮ ಇಡೀ ಸರ್ಕಾರ ಪ್ರತಿಭಟನೆ ಮಾಡಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ಸಂಸದರು ಕೂಡ ಭಾಗಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು. ಬರಗಾಲದ ಪರಿಹಾರ ಹಣವನ್ನೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದರು.

 

Related