ರಾಯಚೂರು: ಜಾತಿಗಣತಿಗೆ ಸಂಬಂಧಿಸಿದಂತೆ, ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೇಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು. ಇದನ್ನು ಓದಿ: ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ: ಸಿಎಂ ಕರೆ
ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ
ರಾಜ್ಯದ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು, ನನ್ನ ಮೇಲಿನ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದರು.
ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ
ಜೆಡಿಎಸ್ ನ ಜಿಟಿದೇವೇಗೌಡ, ಮುಖ್ಯಮಂತ್ರಿಯವರನ್ನು ಬೆಂಬಲಿಸಿ ಮಾತನಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ದ, ವಿರೋಧಪಕ್ಷದವರ ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ ಟಿ ದೇವೇಗೌಡರು ಒಬ್ಬರು ಎಂದರು.