ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು (ಬುಧವಾರ ಮೇ 07) ರಂದು ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದ್ದು ಪೂಜ್ಯ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳ ದಿವ್ಯ ಸಾನಿದ್ಯದಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಹೆಚ್. ಮುನಿಯಪ್ಪ ರವರ ಅಧ್ಯಕ್ಷತೆಯಲ್ಲಿ 66 ಜೋಡಿಗಳ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು, ಈ ಕಾರ್ಯಕ್ರಮದಲ್ಲಿ ಆಶೀರ್ವಾದ ಮಾಡಲು ಬಂದಿರುವ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳಿಗೆ ಧನ್ಯವಾದಗಳನ್ನು ತಿಳಿಸುತ್ತಾ ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ಈ ಶುಭ ಲಗ್ನದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಕ್ಷೇತ್ರದಲ್ಲಿ ಮದುವೆ ಕಾರ್ಯಕ್ರಮ ನಡೆದಿರುವುದು ವಿಶೇಷವಾಗಿದೆ.
ಅಧಿಕಾರಿಗಳು ಮತ್ತು ಪ್ರಾಧಿಕಾರದ ಸದಸ್ಯರು ಉತ್ತಮ ವಾಗಿ ಕಾರ್ಯಕ್ರಮ ಆಯೋಜಿಸಿದ್ದು ನಿಮಗೆ ವಿಷೇಶವಾದ ಧನ್ಯವಾದಗಳನ್ನು ತಿಳಿಸಬೇಕು.
ಮದುವೆಗೆ ಲಕ್ಷಾಂತರ ರೂಗಳನ್ನು ಖರ್ಚು ಮಾಡಿ ಮಾಡುವ ಮದುವೆಗಳಿಗಿಂತ ದೇವರ ಸನ್ನಿದಾನದಲ್ಲಿ ಮಾಡಿರುವ ಈ ಮದುವೆ ಶ್ರೇಷ್ಠವಾಗಿದೆ ತಮಗೆ ಉತ್ತಮ ಆರೋಗ್ಯ ಭಾಗ್ಯವನ್ನು ದೇವರು ಕರುಣಿಸಲಿ ಎಂದರು.