ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಸಿಎಂ ಹೇಳಿದ್ದೇನು.?

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಸಿಎಂ ಹೇಳಿದ್ದೇನು.?

ಬಳ್ಳಾರಿ: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯವರು ಉತ್ತರ ನೀಡಬೇಕೆಂದು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ನಮಗೂ ಜೆಡಿಎಸ್ಗೂ ಸಂಬಂಧವಿಲ್ಲ ಇದು ಅವರ ಕುಟುಂಬದ ವಿಚಾರ ಹಾಗಾಗಿ ಜೆಡಿಎಸ್ ಮತ್ತು ಬಿಜೆಪಿಯವರೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿ ಉತ್ತರ ನೀಡಬೇಕೆಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣ ನಮಗೆ ಸಂಬಂಧಿಸದ ವಿಚಾರ, ಬಿಜೆಪಿ ತನ್ನ ನಿಲುವು ಪ್ರಕಟಿಸಬೇಕು: ಡಿಕೆ ಶಿವಕುಮಾರ್

ಬಳ್ಳಾರಿಯಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಪಾರ್ಟ್ನರ್ ಜೆಡಿಎಸ್ ನವರಾಗಿರುವುದರಿಂದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಉತ್ತರ ನೀಡಬೇಕೆ ಹೊರತಾಗಿ ನಾವಲ್ಲ ಎಂದು ಹೇಳಿದ್ದಾರೆ.

ಆ ಪ್ರಕರಣ ಮತ್ತು ಕಾಂಗ್ರೆಸ್ ನಡುವೆ ಯಾವುದೇ ಸಂಬಂಧವಿಲ್ಲ ಎನ್ನವಂತೆ ಮಾತಾಡಿದರು. ಇದೇನಿದ್ದರೂ ಅವರ ಕುಟುಂಬಕ್ಕೆ ಬಿಟ್ಟ ವಿಚಾರ, ತಮ್ಮ ಪಕ್ಷಕ್ಕೂ ಮತ್ತು ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ, ಆದರೆ ಲೋಕಸಭಾ ಚುನಾವಣೆಗಾಗಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯವರನ್ನು ಇದರ ಬಗ್ಗೆ ಕೇಳಬೇಕು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ಮತ್ತು ಎನ್ ಡಿಎ ನಿಲುವೇನು ಅಂತ ಅವರನ್ನು ಕೇಳಬೇಕು ಎಂದು ಶಿವಕುಮಾಅರ್ ಹೇಳಿದರು.

Related