ಗಣಿ ಧಣಿ ಬಿಜೆಪಿ ಸೇರ್ಪಡೆ ಬಗ್ಗೆ ಹೇಳಿದ್ದೇನು?

ಗಣಿ ಧಣಿ ಬಿಜೆಪಿ ಸೇರ್ಪಡೆ ಬಗ್ಗೆ ಹೇಳಿದ್ದೇನು?

ಕೊಪ್ಪಳ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇದ್ದು, ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ.

ಇನ್ನು ಕಳೆದ ಗೆಲುವು ದಿನಗಳಿಂದ ಜನಾರ್ಧನ್ ರೆಡ್ಡಿ ಅವರು ಬಿಜೆಪಿಗೆ ಮರು ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಗ್ರಾಸವಾಗಿ ಚರ್ಚೆಯಾಗುತ್ತಿತ್ತು. ಇನ್ನು ಇದರ ಬಗ್ಗೆ ಖುದ್ದಾಗಿ ಜನಾರ್ಧನ ರೆಡ್ಡಿ ಅವರೇ ಪ್ರತಿಕ್ರಿಯೆ ನೀಡಿ, ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಏನಾದರೂ ನಮ್ಮ ಜೊತೆ ಮೈತ್ರಿ ಮಾಡಿಕೊಳ್ಳಲು ಬಯಸಿದರೆ ನಾವು ಖಂಡಿತವಾಗಿಯೂ ಬಿಜೆಪಿಯಲ್ಲಿ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇಂದು ಕೊಪ್ಪಳ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರುವ ಬಯಕೆ ವ್ಯಕ್ತಪಡಿಸಿಲ್ಲ ಆದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧನಿರುವುದಾಗಿ ಹೇಳಿದರು.

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕೆನ್ನುವ ಆಸೆ ತನ್ನಲ್ಲೂ ಇದೆ, ಹಾಗಾಗಿ ಬಿಜೆಪಿ ಬಯಸಿದರೆ ಪಕ್ಷದ ಜೊತೆ ತಾನು ಹೊಂದಾಣಿಕೆ ಮಾಡಿಕೊಳ್ಳಲು ತಯಾರಿದ್ದೇನೆ ಎಂದು ರೆಡ್ಡಿ ಹೇಳಿದರು. ಹೊಂದಾಣಿಕೆ ನಡೆಯದೇ ಹೋದರೂ ಲೋಕಸಭಾ ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಗಳು ಗೆದ್ದರೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಬೆಂಬಲ ನೀಡುವುದಾಗಿ ಜನಾರ್ಧನ ರೆಡ್ಡಿ ಹೇಳಿದರು.

Related