ರಾಮ ಮಂದಿರ ಉದ್ಘಾಟನೆ ಎಚ್.ಡಿ.ಕೆ ಹೇಳಿದ್ದೇನು?

ರಾಮ ಮಂದಿರ ಉದ್ಘಾಟನೆ ಎಚ್.ಡಿ.ಕೆ ಹೇಳಿದ್ದೇನು?

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಿಂದ ಇಂದು ದೇಶದಲ್ಲಿರುವ ಕೋಟ್ಯಾನು ಕೋಟಿ ಹಿಂದೂ ಜನಗಳ ಕನಸು ಇಂದು ನನಸಾಗಿದೆ.

ಇನ್ನು ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಏಕ್ಸ್ ಖಾತೆಯ ಮೂಲಕ ಇಡೀ ದೇಶದ ಹಿಂದೂ ಜನತೆಗೆ ಶುಭ ಕೋರಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಪ್ರಧಾನಿಗಳಾದ ಮಾನ್ಯ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ನೆರವೇರುತ್ತಿದೆ. ಈ ಎಲ್ಲಾ ಕರಸೇವಕರ  ಪರಿಶ್ರಮದ ಫಲದಿಂದ ಇಂತಹ ದಿವ್ಯಕ್ಷಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗುವ ಪುಣ್ಯ ನನಗೆ ಧಕ್ಕಿದೆ ಮತ್ತು ಶ್ರೀರಾಮ ದೇವರಿಗೆ ಭಕ್ತಿ ಸಮರ್ಪಣೆ ಮಾಡುವ ಸುದೈವವೂ, ಅವಕಾಶವು ನನ್ನದಾಗಿದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.

ಎಲ್ಲ ಕರಸೇವಕರನ್ನೂ ಸ್ಮರಿಸುತ್ತಾ, ಈ ಸುಸಂದರ್ಭದಲ್ಲಿ ಸಮಸ್ತ ರಾಮಭಕ್ತರಿಗೆ ಶುಭಾಶಯಗಳನ್ನು ಕೋರುತ್ತೇನೆ. ಪ್ರತಿಯೊಬ್ಬರಿಗೂ ಆ ರಾಮದೇವರು ಸುಖ-ಶಾಂತಿ, ನೆಮ್ಮದಿ-ಸಮೃದ್ಧಿಯನ್ನು ಕರುಣಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್​ ನಲ್ಲಿ ಬರೆದುಕೊಂಡಿದ್ದಾರೆ.

 

 

Related