ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಎಂಟಿಬಿ ನಾಗರಾಜ್ ಹೇಳಿದ್ದೇನು?

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಎಂಟಿಬಿ ನಾಗರಾಜ್ ಹೇಳಿದ್ದೇನು?

ಹೊಸಕೋಟೆ: ಈ ಭಾರಿ ಲೋಕಸಭೆ ಚುನಾವಣೆಗೆ ನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಹೈಕಮಾಂಡ್ ಜೊತೆಗೆ ನಮ್ಮ ಕಾರ್ಯಕರ್ತರು ಸಾಕಷ್ಟು ಒತ್ತಡ ಹಾಕಿದ್ದಾರೆ. ಆದರೆ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಹೀಗಾಗಿ ಪಕ್ಷದಿಂದ ಗೆಲ್ಲುವ ಬೇರೆ ವ್ಯಕ್ತಿಗೆ ಟಿಕೆಟ್ ಕೊಟ್ಟು ಚುನಾವಣೆಗೆ ನಿಲ್ಲಿಸಲಿ. ಈ ಬಗ್ಗೆ ಪಕ್ಷದ ಹೈಕಮಾಂಡ್‌ ಈಗಾಗಲೇ ನಾನು ತಿಳಿಸಿದ್ದೇನೆ ಎಂದರು.

 

Related