ಮುಡಾ ಸೈಟು ಹಂಚಿಕೆ ವಿಚಾರಕ್ಕೆ ಸಿಎಂ ಹೇಳಿದ್ದೇನು…?  

ಮುಡಾ ಸೈಟು ಹಂಚಿಕೆ ವಿಚಾರಕ್ಕೆ ಸಿಎಂ ಹೇಳಿದ್ದೇನು…?  

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಭಾರೀ ಚರ್ಚೆಯಾಗುತ್ತಿರುವ ವಿಷಯ ಎಂದರೆ ಅದು ಮುಡಾ ಸೈಟು ಹಂಚಿಕೆಯ ವಿಚಾರ.

ಹೌದು, ಮುಡಾ ಸೈಟು ಹಂಚಿಕೆ ವಿಚಾರದಲ್ಲಿ ಈಗಾಗಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರುಗಳು ಪ್ರತಿಭಟನೆಯನ್ನು ಕೈಗೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಾಧ್ಯಮದವರಿಗೆ ಮುಡಾ ಸೈಟು ಹಂಚಿಕೆಗಳ ಬಗ್ಗೆ ಕೇಳಿದರೆ, ಬಿಜೆಪಿಯವರು ಅಧಿಕಾರದಲ್ಲಿದ್ದಾಗ ನಾವು ಎಷ್ಟೇ ಕೇಸುಗಳನ್ನು ಮಾಡಿದ್ದೇವೆ ಆದರೆ ಸಿಐಬಿಗೆ ಕೊಟ್ಟಿದ್ದಾರೆ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಇಡಿ ದೇಶಕ್ಕೆ ಮಾದರಿಯಾಗಬೇಕು: ಎಂ ಸತೀಶ್ ರೆಡ್ಡಿ

ನಾವು ಇದುವರೆಗೆ ಏಳು ಪ್ರಕರಣಗಳನ್ನು ಸಿಬಿಐಗೆ ನೀಡಿದ್ದೇವೆ, ಆದರೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಾವು ಹಲವಾರು ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿದ್ದರೂ ಒಂದೇ ಒಂದು ಪ್ರಕರಣವನ್ನು ಕೊಟ್ಟಿರಲಿಲ್ಲ, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಿಕೊಡುವ ಅವಶ್ಯಕತೆಯಿಲ್ಲ ಎಂದು ಹೇಳಿದರು.

ಒಟ್ಟಿನಲ್ಲಿ ರಾಜ್ಯ ರಾಜಕೀಯದಲ್ಲಿ ಇದೀಗ ಮುಡಾ ಸೈಟ್ ಹಂಚಿಕೆ ಕುರಿತಂತೆ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಕೈಗೊಳ್ಳುತ್ತಿದ್ದಾರೆ.

Related