ಬಿಬಿಎಂಪಿ ಚುನಾವಣೆ ನಡೆಸುವ ಬಗ್ಗೆ ಡಿಸಿಎಂ ಹೇಳಿದೇನು…?

ಬಿಬಿಎಂಪಿ ಚುನಾವಣೆ ನಡೆಸುವ ಬಗ್ಗೆ ಡಿಸಿಎಂ ಹೇಳಿದೇನು…?

ಬೆಂಗಳೂರು: ರಾಜ್ಯದಲ್ಲಿ ಇದೀಗ ತಾನೇ ಲೋಕಸಭಾ ಚುನಾವಣೆ ಮುಗಿಸಿಕೊಂಡು ಎಲ್ಲಾ ರಾಜಕೀಯ ನಾಯಕರಗಳು ಫುಲ್ ರಿಲ್ಯಾಕ್ಸ್ ಮೂಡಿಲ್ಲಿದ್ದಾರೆ. ಮತ್ತೆ ಇದೀಗ ಕರ್ನಾಟಕ ರಾಜ್ಯದಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ಮಾಡಿದೆ ಎಂಬ ಮಾಹಿತಿ ಇದೀಗ ತಿಳಿದು ಬಂದಿದೆ.

ಹೌದು, ರಾಜ್ಯದಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಮೀಸಲಾತಿ ಸೇರಿದಂತೆ ಇನ್ನಿತರ ಪ್ರಕ್ರಿಯೆ ಸಂಪೂರ್ಣಗೊಳಿಸಲು ಈಗಾಗಲೇ ತಯಾರು ಮಾಡಿಕೊಳ್ಳಲಾಗುತ್ತಿದ್ದು, ಆದಷ್ಟು ಬೇಗ ಚುನಾವಣೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ಮಾಡಲಾಗುವುದು. ನಾವು ಮಾಡದಿದ್ದರೆ ಕೋರ್ಟ್ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಎಸ್ ವೈ ಬಂಧನ ಕೋರಿ ಹೈಕೋರ್ಟ್​​ಗೆ ರಿಟ್ ಅರ್ಜಿ

ಒಮ್ಮೆ ಸಚಿವರಾದರೆ ಅವರು, ಇಡೀ ದೇಶಕ್ಕೆ ಸಚಿವರಾಗುತ್ತಾರೆಯೇ ಹೊರತು ಅವರು ಪ್ರತಿನಿಧಿಸುವ ರಾಜ್ಯಕ್ಕೆ ಸಚಿವರಾಗುವುದಿಲ್ಲ. ಯಾವುದೇ ರಾಜಕಾರಣಿಯಾದರೂ ತಮ್ಮ ರಾಜ್ಯ ಹಾಗೂ ಊರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವುದು ಸಹಜ. ನಾನು ಸಚಿವನಾಗಿದ್ದಾಗ ಪೈಲೆಟ್ ಯೋಜನೆಗಳನ್ನು ನನ್ನ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿದ್ದೆ. ಖರ್ಗೆ ಅವರು ಕಾರ್ಮಿಕ ಸಚಿವರಾಗಿದ್ದಾಗ ಕಲುಬುರ್ಗಿಯಲ್ಲಿ ಇಎಸ್ಐ ಆಸ್ಪತ್ರೆ ಕಟ್ಟಿಸಿದರು. ಇದು ಸಹಜ. ಸೋಮಣ್ಣ ಅವರು ಈಗಷ್ಟೇ ಸಚಿವರಾಗಿ ಕಣ್ಣು ಬಿಡುತ್ತಿದ್ದಾರೆ. ನಮ್ಮ ರಾಜ್ಯದಿಂದ ಮಂತ್ರಿಯಾದವರು ರಾಜ್ಯಕ್ಕೆ ಶಕ್ತಿ ತುಂಬಲಿ. ನಿರ್ಮಲಾ ಸೀತರಾಮನ್ ಅವರು ಹಣಕಾಸು ಸಚಿವೆಯಾಗಿ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಘೋಷಣೆ ಮಾಡಿದರು. ಆದರೆ ಹಣ ಬರಲಿಲ್ಲ. ಏನು ಮಾಡಲು ಸಾಧ್ಯ? ಎಂದು ಪ್ರಶ್ನಿಸಿದರು.

 

Related