ಪ್ರಜ್ವಲ್ ರೇವಣ್ಣ ಬಂಧನಕ್ಕೆ ಗೃಹ ಸಚಿವರು ಹೇಳಿದ್ದೇನು..?

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಗೃಹ ಸಚಿವರು ಹೇಳಿದ್ದೇನು..?

ಬೆಂಗಳೂರು: ಸುಮಾರು ಒಂದು ತಿಂಗಳಿಗಿಂತಲೂ ಹೆಚ್ಚು ದಿನ ವಿದೇಶದಲ್ಲಿ ತಲೆ ನಡೆಸಿಕೊಂಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಅವರು ಇದೀಗ ಭಾರತಕ್ಕೆ ಬಂದು ಎಸ್ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ಕಾನೂನು ಪ್ರಕಾರವಾಗಿ ಯಾವ ರೀತಿ ತನಿಖೆ ಮಾಡಬೇಕು ಅದೆಲ್ಲ ತನಿಖೆಗಳನ್ನು ಎಸ್ಐಟಿ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಹೇಳುತ್ತಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರು ತಾವಾಗಿಯೇ ಬಂದು ಎಸ್ಐಟಿ ಅಧಿಕಾರಿಗಳ ಮುಂದೆ ಶರಣಾಗಿರುವುದರಿಂದ ಎಸ ಐ ಟಿ ಅಧಿಕಾರಿಗಳಿಗೆ ವಿಚಾರಣೆಗೆ ಸುಲಭವಾಗಿದೆ ಹಾಗಾಗಿ ಮುಂದಿನ ಕಾನೂನು ಕ್ರಮ ಏನೆಂಬುದು ಎಸ್ಐಟಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತಿಳಿಸುವುದಾಗಿ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ವಿಚಾರಣೆ ನಡೆಸುವುದು ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಅನುಸರಿಸಲಾಗುವುದು. ಸ್ವಾಭಾವಿಕವಾಗಿ ಅವರು ಬಂಧನಕ್ಕೆ ಸಹಕರಿಸಬೇಕಿತ್ತು. ಅವರು ರಾಜತಾಂತ್ರಿಕ ಪಾಸ್‌ಪೋರ್ಟ್ ಹೊಂದಿದ್ದರಿಂದ, ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರವೇ ಅವರನ್ನು ಬಂಧಿಸಲಾಯಿತು ಎಂದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ; ಮಗ ಪತ್ತೆ, ತಾಯಿ ನಾಪತ್ತೆ..!

ಇನ್ನು ಪ್ರಜ್ವಲ್ ರೇವಣ್ಣ ಅವರಿಂದ ತೊಂದರೆ ಅನುಭವಿಸಿದವರು ಮುಂದೆ ಬಂದು ಎಸ್‌ಐಟಿ ಮತ್ತು ಪೊಲೀಸರಿಗೆ ದೂರು ನೀಡುವಂತೆ ಮತ್ತು ನಾವು ಅವರಿಗೆ ಎಲ್ಲ ರೀತಿಯ ರಕ್ಷಣೆಯನ್ನು ಒದಗಿಸುತ್ತೇವೆ ಎಂದು ನಾವು ಈಗಾಗಲೇ ಹೇಳಿದ್ದೇವೆ. ಮುಂದಿನ ಬೆಳವಣಿಗೆಗಳನ್ನು ನಾವು ಕಾದು ನೋಡಬೇಕಾಗಿದೆ ಎಂದು ಅವರು ತಿಳಿಸಿದರು.

Related