ಎಚ್.ಡಿ.ಕೆ ಮಾಡುತ್ತಿರುವುದು ನೀಚ ರಾಜಕೀಯ: ಯತೀಂದ್ರ

ಎಚ್.ಡಿ.ಕೆ ಮಾಡುತ್ತಿರುವುದು ನೀಚ ರಾಜಕೀಯ: ಯತೀಂದ್ರ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಟ್ರಾನ್ಸ್ಫರ್ ಮಾಫಿಯಾ ನಡೆಯುತ್ತಿದೆ ಎಂದು ಬಿಜೆಪಿ ನಾಯಕರು ಮತ್ತು ಜೆಡಿಎಸ್ ನಾಯಕರು ಕಾಂಗ್ರೆಸ್ಸಿಗರ ಮೇಲೆ ಆರೋಪ ಮಾಡುತ್ತಿದ್ದಾರೆ.  ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಅವರು ಟ್ರಾನ್ಸ್ಫರ್ ಮಾಫಿಯಾದಲ್ಲಿ ಕೈಗೊಂಡಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು.

ಇದಕ್ಕೆ ಸಂಬಂಧಿಸಿದಂತೆ ಯತೀಂದ್ರ ಅವರು ಎಚ್ ಡಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಮಾಡುತ್ತಿರುವುದು ನೀಚ ರಾಜಕಾರಣ, ಅವರು ಅಧಿಕಾರದಲ್ಲಿದ್ದಾಗ ದಂಧೆ ಮಾಡುತ್ತಿದ್ದರು ಅನಿಸುತ್ತದೆ, ಹೀಗಾಗಿ ಅವರು ಮಾತೆತ್ತಿದರೆ ದಂಧೆ, ಲಂಚ, ಹಗರಣ ಬಗ್ಗೆ ಮಾತಮಾಡುತ್ತಾರೆ ಎಂದು ಮಾಜಿ ಶಾಸಕ ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಾವು ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊವನ್ನಿಟ್ಟುಕೊಂಡು ಸರ್ಕಾರವನ್ನು, ಸಿಎಂ ಸಿದ್ದರಾಮಯ್ಯನವರನ್ನು ಕಟುವಾಗಿ ಟೀಕಿಸುತ್ತಿರುವ ಮಾಜಿ ಸಿಎಂ ಕು ಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಹೇಳುವುದೇನು?: ತಾವು ಮೊಬೈಲ್ ನಲ್ಲಿ ಮಾತನಾಡುವ ವೇಳೆ ಪ್ರಸ್ತಾಪಿಸಿದ್ದ ಲಿಸ್ಟ್ ಬಗ್ಗೆ ವಿರೋಧ ಪಕ್ಷಗಳ ನಾಯಕರು ತರಾಟೆಗೆ ತೆಗೆದುಕೊಳ್ಳುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಡಾ ಯತೀಂದ್ರ, ಸಿಎಸ್​ಆರ್ ಫಂಡ್​​ ಬಗ್ಗೆ ನಾನು ಅವತ್ತು ಮಾತನಾಡಿದ್ದು. ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದ್ರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ. ವಿವೇಕಾನಂದ ಯಾರು ಎಂದು ನನಗೆ ಗೊತ್ತಿಲ್ಲ. ಇನ್ಸ್​ಪೆಕ್ಟರ್​​ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ. ನಮ್ಮ ಕ್ಷೇತ್ರದಲ್ಲಿ ವಿವೇಕಾನಂದ ಅಂತಾ ಬಿಇಒ ಕೂಡ ಇದ್ದಾರೆ. ವಿಪಕ್ಷಗಳು ಹತಾಶರಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ. ಇವರು ಅಧಿಕಾರದಲ್ಲಿದ್ದರು, ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂಧೆಯನ್ನೇ ಮಾಡುತ್ತಿದ್ದರಾ, ಭ್ರಷ್ಟಾಚಾರ, ದಂಧೆ ಆಗ್ತಿದೆ ಎಂದು ಸುಳ್ಳು ಆರೋಪ ಮಾಡಬಾರದು ಎಂದರು.

 

Related