ಡಿವಿ ಸದಾನಂದ ಗೌಡ ಅವರ ಮುಂದಿನ ನಡೆ ಏನು?

ಡಿವಿ ಸದಾನಂದ ಗೌಡ ಅವರ ಮುಂದಿನ ನಡೆ ಏನು?

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಡಿವಿ ಸದಾನಂದ ಗೌಡರಿಗೆ ಬಿಜೆಪಿಯಿಂದ ಟಿಕೆಟ್ ತಪ್ಪಿರುವುದರಿಂದ ಈ ಬಾರಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ ಎಂಬುವ ಮಾತುಕತೆ ರಾಜ್ಯ ರಾಜಕೀಯದಲ್ಲಿ ಗ್ರಾಸವಾಗಿ ಚರ್ಚೆ ಆಗುತ್ತಿರುವ ಬೆನ್ನಲ್ಲೇ ಡಿವಿ ಸದಾನಂದ ಗೌಡ ಅವರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ನನ್ನ ಸಂಪರ್ಕಿಸಿದ್ದು ನಿಜವೆಂದು ಮಹತ್ವದ ಹೇಳಿಕೆಯನ್ನು ಹೇಳಿದ್ದಾರೆ.

ನನ್ನ ನಿರ್ಧಾರಗಳನ್ನು ನಾನು ನನ್ನ ಕುಟುಂಬದ ಸದಸ್ಯರ ಜತೆ ಚರ್ಚಿಸಬೇಕು. ಬೆಂಗಳೂರು ಉತ್ತರದಲ್ಲಿ ನಿಮಗೆ ಟಿಕೆಟ್‌ ಎಂದು ಹೇಳಿ ಕೊನೇ ಕ್ಷಣದಲ್ಲಿ ನನ್ನ ರಕ್ಷಣೆಗೆ ಬರಲಿಲ್ಲ. ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ಮಂಗಳವಾರ ಸುದ್ದಿಗೋಷ್ಠಿ ಕರೆಯುತ್ತೇನೆ. ನಾಳೆ ಯಾವ ನಿರ್ಣಯ ಅಂತ ಈಗಲೇ ಹೇಳಿಬಿಟ್ಟರೆ ನಾಳೆಗೆ ಏನೂ ಉಳಿಯುವುದಿಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಹೀಗಿದ್ದರೂ ತಿಳಿದೂ ತಿಳಿದೂ ಹೀಗೆ ಮಾಡಿರುವುದು ಬೇಜಾರು ತಂದಿದೆ ಎಂದು ತಿಳಿಸಿದರು.

ಹಾಗಾದರೆ ಲೋಕಸಭಾ ಚುನಾವಣೆಗೆ ಬಿಜೆಪಿಯಲ್ಲಿ ಟಿಕೆಟ್  ತಪ್ಪಿರುವುದರಿಂದ ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ಕಾದು ನೋಡಬೇಕಾಗಿದೆ.

 

Related