ಜೆಪಿಯವರಿಗೆ ಪ್ರತಿಭಟನೆ ಮಾಡುವ ಯಾವ ನೈತಿಕತೆ ಇದೆ: ಸಿಎಂ

ಜೆಪಿಯವರಿಗೆ ಪ್ರತಿಭಟನೆ ಮಾಡುವ ಯಾವ ನೈತಿಕತೆ ಇದೆ: ಸಿಎಂ

ಹಾಸನ: ಕಾಂಗ್ರೆಸ್ ಸರ್ಕಾರ ಘೋಷಿಸಿರುವ 10 ಕೆಜಿ ಹಕ್ಕಿಗಳ ಬಗ್ಗೆ ಈಗಾಗಲೇ ಕೇಂದ್ರ ಮತ್ತು ರಾಜ್ಯಗಳಲ್ಲಿ ಮಾತುಕತೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರವು10 ಕೆಜಿ ಅಕ್ಕಿ ನೀಡಲು ಹರ ಸಾಹಸ ಪಡುತ್ತಿದೆ.

ಇನ್ನು ಬಿಜೆಪಿ ಪಕ್ಷದವರು ಪ್ರತಿಭಟನೆ ಮಾಡುವ ಮೊದಲು ಕೇಂದ್ರ ಸರ್ಕಾರಕ್ಕೆ 10 ಕೆಜಿ ಅಕ್ಕಿ ಕೊಡಲೆಂದು ಮನವಿ ಮಾಡುವುದು ಬಿಟ್ಟು ಪ್ರತಿಭಟನೆ ಮಾಡಲು ತಯಾರಾಗಿದ್ದಾರೆ. ಇವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಹೇಳಿದ್ದೆಲ್ಲವನ್ನೂ ಮಾಡಿದ್ದಾರಾ? ಬಿಜೆಪಿಯವರಿಗೆ ಪ್ರತಿಭಟನೆ ಮಾಡುವ ಯಾವ ನೈತಿಕತೆ ಇದೆ ಎಂದು ಹಾನಸದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 10 ಕೆಜಿ ಅಕ್ಕಿ ನೀಡದಿದ್ದರೆ ಜುಲೈ ಒಂದರಿಂದ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ನಾಯಕರಿಗೆ ಹಾಸನದಲ್ಲಿ ಸವಾಲು ಹಾಕಿದ ಸಿದ್ದರಾಮಯ್ಯ, ಬಿಜೆಪಿಯವರು ಪ್ರತಿಭಟನೆ ಮಾಡುವ ಬದಲು ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಕೊಡಿಸಲಿ ಎಂದರು.

ರಾಜಕೀಯ ಗಿಮಿಕ್ ಮಾಡಬಾರದು ಎಂದು ಹೇಳಿದ ಸಿದ್ದರಾಮಯ್ಯ, ನಾವು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇವೆ. ಅಕ್ಕಿಯನ್ನು ಖರೀದಿ ಮಾಡುತ್ತೇವೆ. ಬಿದಿಗಿಳಿದು ಹೋರಾಟ ಮಾಡುವ ಬದಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಅಕ್ಕಿ ಕೊಡಿಸಲಿ. ಬಡವರಿಗೆ ಅಕ್ಕಿ ಕೊಡಬೇಕನ್ನುವುದು ನಮ್ಮ ನಿಲುವಾಗಿದೆ ಎಂದರು. ಕೇಂದ್ರ ಸರ್ಕಾರದವರು ಈಗ ರಾಜಕೀಯ ಮಾಡುತ್ತಿದ್ದಾರಲ್ವಾ, ದ್ವೇಷದ ರಾಜಕಾರಣ ಮಾಡುತ್ತೀರಲ್ವಾ ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿ ನಿಮ್ಮ ಬಳಿ ಕೇಳಿದರೆ ಅಕ್ಕಿ ಕೊಡಿಸಿ ಅಂತ ನೀವು ದಯಮಾಡಿ ಹೇಳಿ ಎಂದು ಮಾಧ್ಯಮದವರಿಗೆ ಸೂಚಿಸಿದರು.

ಕೇಂದ್ರ ಸರ್ಕಾರವನ್ನು ಕೇಳಿ 10 ಕೆಜಿ ಅಕ್ಕಿ ಕೊಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದೀರಾ ಎಂಬ ಮಾಜಿ ಸಚಿವ ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಅಶೋಕ್, ಯಡಿಯೂರಪ್ಪ, ಬಸವರಾಜ‌ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತಾ? ನಾವು ಘೋಷಣೆ ಮಾಡಿದ್ದೆವು. ಆರಂಭದಲ್ಲಿ ಎಫ್‌ಸಿಐ ಹೆಚ್ಚುವರಿ ಅಕ್ಕಿ ಕೊಡಲು ಒಪ್ಪಿತ್ತು. ನಂತರ ಕೊಡುವುದಿಲ್ಲ ಎಂದು ಪತ್ರ ಬರೆದಿದೆ. ಇದರ ಅರ್ಥ ಏನು? ರಾಜಕೀಯ ‌ಅಲ್ಲವೇ ಇದು ಎಂದು ಪ್ರಶ್ನಿಸಿದ್ದಾರೆ.

 

Related