ಬಡವರ ಹಸಿವಿಗೆ ಅನ್ನ ನೀಡುವುದಕ್ಕಿಂತಲೂ ದೊಡ್ಡ ಧರ್ಮ ಜಗತ್ತಿನಲ್ಲಿ ಯಾವುದಿದೆ?: ಎಚ್.ಸಿ. ಮಾದೇವಪ್ಪ

ಬಡವರ ಹಸಿವಿಗೆ ಅನ್ನ ನೀಡುವುದಕ್ಕಿಂತಲೂ ದೊಡ್ಡ ಧರ್ಮ ಜಗತ್ತಿನಲ್ಲಿ ಯಾವುದಿದೆ?: ಎಚ್.ಸಿ. ಮಾದೇವಪ್ಪ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಹೆಚ್ಚು ಹಣ ನೀಡುತ್ತೇವೆ ಅಕ್ಕಿ ನೀಡಿ ಎಂದರು ಸಹ ಅಕ್ಕಿ ನೀಡದ ಕೇಂದ್ರ ಸರ್ಕಾರ, ಈಗ ಧರ್ಮದ ಹೆಸರಿನಲ್ಲಿ ಅಕ್ಷತೆಯ ಗಂಟನ್ನು ಮನೆ ಮನೆಗೆ ತಲುಪಿಸುತ್ತಿರುವುದು ನೋಡಿದರೆ ಧರ್ಮದ ನೈಜ ಜವಾಬ್ದಾರಿಗಳ ಬಗ್ಗೆ ಬಿಜೆಪಿಯ ಕೇಂದ್ರ ನಾಯಕರಿಗೆ ಇಲ್ಲವೆಂದು ಸಚಿವ ಎಚ್ ಸಿ ಮಾದೇವಪ್ಪ ಅವರು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ

ಹಸಿವು ಮುಕ್ತ ಕರ್ನಾಟಕದ ಉದ್ದೇಶದಿಂದ ಜಾರಿಗೊಳಿಸಿದ್ದ ಅನ್ನಭಾಗ್ಯ ಯೋಜನೆಗೆ ಹೆಚ್ಚಿನ ಹಣ ನೀಡಿ ಅಕ್ಕಿಯನ್ನು ಕೊಂಡುಕೊಳ್ಳುತ್ತೇವೆ ಎಂದಾಗಲೂ ಕೇಂದ್ರದಿಂದ ಅಕ್ಕಿ ನೀಡದವರು ಈ ದಿನ ಧರ್ಮದ ಹೆಸರಲ್ಲಿ ಅಕ್ಷತೆಯ ಗಂಟನ್ನು ಮನೆ ಮನೆಗೆ ಕಳಿಸುತ್ತಿರುವುದನ್ನು ನೋಡಿದರೆ ಇವರಿಗೆ ಧರ್ಮದ ನೈಜ ಜವಾಬ್ದಾರಿಯ ಬಗ್ಗೆ ತಿಳುವಳಿಕೆ ಇಲ್ಲ ಎಂಬುದು ಸ್ಪಷ್ಟವಾಗಿ ಕಾಣುತ್ತದೆ.

ಬಡವರ ಹಸಿವಿಗೆ ಅನ್ನ ನೀಡುವುದಕ್ಕಿಂತಲೂ ದೊಡ್ಡ ಧರ್ಮ ಈ ಜಗತ್ತಿನಲ್ಲಿ ಯಾವುದಿದೆ? ಬಡವರ ಹಸಿವಿಗೆ ನೀಡುವ ಅನ್ನದ ವಿಷಯದಲ್ಲೂ ರಾಜಕೀಯ ಮಾಡುವಂತಹ ಅಮಾನವೀಯ ಪ್ರವೃತ್ತಿ ತೋರಿದ ಬಿಜೆಪಿಗರು ಧರ್ಮದ ಕುರಿತಂತೆ ಮಾತನಾಡುತ್ತಿದ್ದರೆ ಅದನ್ನು ಕಂಡು ನಗಬೇಕೋ ಅಳಬೇಕೋ ಎಂದು ನನಗೆ ತಿಳಿಯುತ್ತಿಲ್ಲ ಎಂದರು.

 

Related