ಸಿದ್ದರಾಮಯ್ಯ ಹೇಳಿದ್ದೇ ನಡೆಯೋದು.!

ಸಿದ್ದರಾಮಯ್ಯ ಹೇಳಿದ್ದೇ ನಡೆಯೋದು.!

ಬೆಂಗಳೂರು , ಜು 12 : ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಎಲ್ಲ ಹಂತದಲ್ಲಿಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ತುಳಿಯುತ್ತಲೇ ಬಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಅಸಹಾಯಕ ಡಿಕೆಶಿ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಮೂಗಿನ ನೇರಕ್ಕೆ ಎಲ್ಲವೂ ನಡೆಯುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

ಸಿದ್ದರಾಮಯ್ಯ ಎಲ್ಲಾ ಹಂತದಲ್ಲೂ ಕೆಪಿಸಿಸಿ ಅಧ್ಯಕ್ಷರನ್ನು ತುಳಿಯುತ್ತಲೇ ಬಂದಿದ್ದಾರೆ. ಪದಾಧಿಕಾರಿಗಳ ಪಟ್ಟಿ, ಪ್ರಚಾರ ಸಮಿತಿಗೆ ಅಧ್ಯಕ್ಷರ ನೇಮಕ, ಚುನಾವಣಾ ಟಿಕೆಟ್ ಎಲ್ಲವೂ ಸಿದ್ದರಾಮಯ್ಯ ಮೂಗಿನ ನೇರಕ್ಕೆ ನಡೆದು ಹೋಗಿದೆ. ಕೆಪಿಸಿಸಿ ಅಧ್ಯಕ್ಷರು ಬರೇ ರಬ್ಬರ್ ಸ್ಟಾö್ಯಂಪ್ ಅಷ್ಟೇ! ಎಂದು ಕುಟುಕಿದೆ.

ಅಧಿಕಾರಕ್ಕಾಗಿ ಸಿದ್ದರಾಮಯ್ಯ ಏನು ಬೇಕಾದರೂ ಮಾಡುತ್ತಾರೆ! ಅಂದು ದಲಿತ ನಾಯಕ ಪರಮೇಶ್ವರ್ ಅವರ ವಿರುದ್ಧ ಸಂಚು ನಡೆಸಿ ಬಲಿ ಹಾಕಿದರು. ಇಂದು ಡಿಕೆಶಿ ಅವರ ರಾಜಕೀಯ ಜೀವನದ ಬಲಿ ತೆಗೆಯಲು ಹೊಂಚು ಹಾಕುತ್ತಿದ್ದಾರೆ. ಇಷ್ಟೆಲ್ಲ ತನ್ನ ಸುತ್ತ ನಡೆಯುತ್ತಿದ್ದರೂ, ಕೆಪಿಸಿಸಿ ಅಧ್ಯಕ್ಷರು ಅಸಹಾಯವಾಗಿರುವುದು ವಿಪರ್ಯಾಸ ಎಂದು ವ್ಯಂಗ್ಯವಾಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ, ಅಧಿಕಾರಕ್ಕೆ ಬಂದರೆ ಫಿಫ್ಟಿ- ಫಿಫ್ಟಿ ಸಿಎಂ ಸ್ಥಾನ ಹಂಚಿಕೆ ಎಂಬ ಬಣ್ಣದ ಮಾತಿಗೆ ಮರುಳಾಗಬೇಡಿ. ಮೊದಲನೆಯದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ, ಎರಡನೆಯದಾಗಿ ಕಾಂಗ್ರೆಸ್ ಪಕ್ಷದ ಜೊತೆ ನಿಮ್ಮನ್ನೂ ಮುಳುಗಿಸಲು ಸಿದ್ದರಾಮಯ್ಯ ಕಾಯುತ್ತಿದ್ದಾರೆ! ಎಂದು ಎಚ್ಚರಿಕೆ ನೀಡಿದೆ.

Related