ದೆಹಲಿ: ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು (ಮಂಗಳವಾರ ಜುಲೈ 23) ರಂದು ಕೇಂದ್ರ ಹಣಕಾಸು ಸಚಿವೆ ಆಗಿರುವಂತಹ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಿದ್ದು ಈ ಬಜೆಟ್ ಮಂಡನೆಯಲ್ಲಿ ಹಲವು ಸರಕು ಹಾಗೂ ಸೇವೆಗಳ ಮೇಲಿನ ತೆರಿಗೆ ಏರಿಳಿತ ಮಾಡಲಾಗಿದೆ.
ಅದರಂತೆ ಇಂದು ಬಜೆಟ್ ಮಂಡನೆಯಲ್ಲಿ ಯಾವ ಸರಕು ಮತ್ತು ಸೇವೆಗಳಲ್ಲಿ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ.
ಯಾವುದು ಅಗ್ಗ?
ಚಿನ್ನ, ಬೆಳ್ಳಿ, ಪ್ಲಾಟಿನಂ ಮೇಲಿನ ಆಮದು ಸುಂಕ ಕಡಿತ
ತಾಮ್ರದ ಮೇಲೂ ತೆರಿಗೆ ಕಡಿತ
ಮೊಬೈಲ್ ಫೋನ್ ಬಿಡಿ ಭಾಗಗಳ ಮೇಲಿನ ತೆರಿಗೆ ಇಳಿಕೆ
ಮೊಬೈಲ್ ಫೋನ್ ಬೆಲೆ ಇಳಿಕೆ
ಮೊಬೈಲ್ ಫೋನ್ ಚಾರ್ಜರ್ ಬೆಲೆ ಇಳಿಕೆ
ಕ್ಯಾನ್ಸರ್ ಔಷಧದ ಬೆಲೆ ಇಳಿಕೆ
ಸೋಲಾರ್ ಪ್ಯಾನಲ್ಗಳ ಬೆಲೆ ಇಳಿಕೆ
ವಿದ್ಯುತ್ ತಂತಿ & ಎಕ್ಸ್ ರೇ ಉಪಕರಣಗಳ ಬೆಲೆ ಇಳಿಕೆ
ಆದಾಯ ತೆರಿಗೆ ಪದ್ಧತಿ ಮತ್ತಷ್ಟು ಸರಳೀಕರಣ
ವಿದೇಶಿ ಬಟ್ಟೆ, ಚರ್ಮೋತ್ಪನ್ನಗಳು, ಟಿವಿ ಅಗ್ಗವಾಗಲಿದೆ
20 ಖನಿಜಗಳ ಮೇಲೆ ಅಬಕಾರಿ ಸುಂಕ ಇಳಿಕೆ
ಇಕಾಮರ್ಸ್ ಮೇಲಿನ ಟಿಡಿಎಸ್ ಶೇ 1ರಿಂದ ಶೇ 0,1ಕ್ಕೆ ಇಳಿಕೆ
ಸ್ಟಾರ್ಟ್ಅಪ್ ವ್ಯವಸ್ಥೆ: ಏಂಜೆಲ್ ಟ್ಯಾಕ್ಸ್ ರದ್ದು
ಯಾವುದು ತುಟ್ಟಿ?
ಮರು ಬಳಕೆ ಆಗದ ಎಲ್ಲಾ ರೀತಿಯ ಪ್ಲಾಸ್ಟಿಕ್ ವಸ್ತುಗಳ ಬೆಲೆ ಏರಿಕೆ
ವಿವಿಧ ರೀತಿಯ ಬಟ್ಟೆ, ವಸ್ತ್ರಗಳ ಬೆಲೆ ಏರಿಕೆ
ಎಲ್ಲಾ ರೀತಿಯ ವಿದ್ಯುತ್ ಉಪಕರಣಗಳ ಬೆಲೆ ಏರಿಕೆ
ಮೊಬೈಲ್ ಟವರ್ ಬಿಡಿ ಭಾಗಗಳ ಬೆಲೆ ಏರಿಕೆ
ಸ್ಟೇಟ್ ಸ್ಟ್ಯಾಂಪ್ ಡ್ಯೂಟಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಗಳಿಗೆ ಅವಕಾಶ
ಈ ಬಾರಿ ಕೇಂದ್ರ ಬಜೆಟ್ ಮಂಡನೆಯಲ್ಲಿ ಹಲವಾರು ಸರಕು ಸೇವೆಗಳ ಮೇಲೆ ಬೆಲೆ ಏರಿಳಿತ ಕಂಡಿದ್ದು, ಪರಿಸರ ಸ್ನೇಹಿ ನಿಲುವನ್ನು ಅನುಸರಿಸಿದೆ. ಅದರಲ್ಲೂ ಪರಿಸರಕ್ಕೆ ಮಾರಕವಾದ, ಮರು ಬಳಕೆ ಮಾಡಲು ಸಾಧ್ಯವೇ ಆಗದ ಪ್ಲಾಸ್ಟಿಕ್ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಸರ್ಕಾರ ಪರಿಸರ ಸ್ನೇಹಿ ನಿಲುವು ಅನುಸರಿಸಿದೆ.