ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ..? : ಡಿಕೆಶಿ

ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ..? : ಡಿಕೆಶಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಕೇವಲ ಮೂರು ದಿನಗಳ ಬಾಕಿ ಇದ್ದು ಮೊದಲನೇ ಹಂತದ ಚುನಾವಣೆ ಇದೆ ಏಪ್ರಿಲ್ 26ರಂದು ನಡೆಯಲಿದ್ದು ಎಲ್ಲ ಪಕ್ಷದ ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ದೇವೇಗೌಡ ಅವರನ್ನು ಕಾಂಗ್ರೆಸ್ ಪಕ್ಷವೇ ದೇಶಕ್ಕೆ ಪ್ರಧಾನಿ ಯನ್ನಾಗಿ ನೇಮಿಸಿದೆ ಆದರೂ ಕೂಡ ದೇವೇಗೌಡರು ಕಣ್ಣೀರು ಹಾಕುತ್ತಾರೆ, ಈ ಕಣ್ಣೀರಿಗೆ ಕಾರಣವೇನು ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿದೆ. ಆದರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೆ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಸಿಕೆ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾದ ತೋಳ್ಕಪ್ಪಿಯನ್ ತಿರುಮವಳವನ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಮಾಡಿದ್ದು ಹಾಸನ ಜಿಲ್ಲೆಯಲ್ಲ, ನಮ್ಮ ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಹೀಗಾಗಿ ಅವರು ಕಣ್ಣೀರು ಹಾಕುವ ಪರಿಸ್ಥಿತಿ ಇಲ್ಲ. ಅವರಿಗೆ ತಮ್ಮ ಕೊಡುಗೆ ಬಗ್ಗೆ ಹೇಳಲು ಆಗುವುದಿಲ್ಲ. ಅವರು ಏನೇ ಪ್ರಯತ್ನ ಮಾಡಲಿ, ಅವರು ಹೇಳಿರುವಂತೆ ನಾಲ್ಕು ಸೀಟು ಬರುವುದಿಲ್ಲ. ಮೂರು ಅಧಿಕೃತ, ಒಂದು ಅನಧಿಕೃತ ಸೀಟುಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ತಿಳಿಸಿದರು.

 

 

 

Related