ಶಿವಮೊಗ್ಗ ಕ್ಷೇತ್ರದಲ್ಲಿ ಗೆಲ್ಲೋರು ಯಾರು..?

ಶಿವಮೊಗ್ಗ ಕ್ಷೇತ್ರದಲ್ಲಿ ಗೆಲ್ಲೋರು ಯಾರು..?

ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರ ಇಡೀ ಕರ್ನಾಟಕದಲ್ಲಿ ಭಾರಿ ಪೈಪೋಟಿಯ ಕ್ಷೇತ್ರವಾಗಿ ಪರಿಣಮಿಸಿದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಈ ಬಾರಿ ಮತದಾನ ಗುರುಗಳು ಯಾವ ಅಭ್ಯರ್ಥಿಯ ಕೈಯನ್ನು ಹಿಡಿಯುತ್ತಾರೆ ಎಂಬ ಕುತೂಹಲ ಇಡೀ ಕರ್ನಾಟಕ ರಾಜ್ಯದ ಜನತೆಯಲ್ಲಿ ಕೆರಳಿಸಿದೆ. ಇದನ್ನೂ ಓದಿ: ಮೈಸೂರು-ಕೊಡಗು ಕ್ಷೇತ್ರದಲ್ಲಿ​ ಒಡೆಯರ್ ಗೆಲುವು ಖಚಿತ..!

ಹೌದು ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಕಣದಲ್ಲಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ ಬಿವೈ ರಾಘವೇಂದ್ರ ಅವರು ಕಣದಲ್ಲಿದ್ದು , ಇದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಕೂಡ ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

ಈಗಾಗಲೇ ಮಾಹಿತಿಗಳ ಪ್ರಕಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಅವರು ಬಹುಮತಗಳ ಅಂತರವನ್ನು ಕಾಪಾಡಿಕೊಂಡಿದ್ದಾರೆ.

ಹಾಗಾದ್ರೆ ಈ ಬಾರಿಯೂ ಕೂಡ ಹಾಲಿ ಸಂಸದ ಬಿ ವೈ ರಾಘವೇಂದ್ರ ಅವರೇ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುತಾರ ಕಾದು ನೋಡಬೇಕಿದೆ.

 

 

Related