ಡಿಕೆಶಿ ಶಾಸಕರಿಗೆ ಮತ್ತು ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ಯಾಕ್ಕೆ..?

ಡಿಕೆಶಿ ಶಾಸಕರಿಗೆ ಮತ್ತು ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ಯಾಕ್ಕೆ..?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕೆಂದು ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಬಾರಿ ಚರ್ಚೆ ನಡೆಯುತ್ತಿದೆ.

ರಾಜ್ಯದಲ್ಲಿ ಇನ್ನೂ ಮೂವರು ಉಪಮುಖ್ಯಮಂತ್ರಿ ಸ್ಥಾನವನ್ನು ಬೇರೆ ಸಚಿವರಿಗೆ ನೀಡಬೇಕೆಂದು ಈಗಾಗಲೇ ಕಾಂಗ್ರೆಸ್ ಪಕ್ಷದ ಸಚಿವರು ಮತ್ತು ಶಾಸಕರು ಹೇಳುತ್ತಿದ್ದಾರೆ. ಇದನ್ನೂ ಓದಿ: ಸ್ವಾಮೀಜಿಗಳು ರಾಜಕಾರಣದ ಸುದ್ದಿಗೆ ಬರಬೇಡಿ: ಡಿಕೆಶಿ

ಇದರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆಸಿದ್ದು, ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡಿದರೆ ಅವರ ವಿರುದ್ಧ ನೋಟಿಸ್ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಚಿವರಿಗೂ ಮತ್ತು ಶಾಸಕರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಕ್ರಮಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ ಎಂದು ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ.

ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾರ ಶಿಫಾರಸು ಸಹ ಅವಶ್ಯಕತೆ ಇಲ್ಲ. ನಾನು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಮಾತನಾಡಿದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ. ಪಕ್ಷದ ಶಿಸ್ತು ಕಾಪಾಡಲು ಅನಿವಾರ್ಯವಾಗಿ ನೋಟಿಸ್​ ನೀಡುತ್ತೇವೆ ಎಂದು ಹೇಳಿದ್ದಾರೆ.

ಪಕ್ಷ ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ನಮಗೇ ಗೊತ್ತು. ಪಕ್ಷದ ಹಿತದೃಷ್ಟಿಯಿಂದ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಒಳ್ಳೆಯದು. ಯಾವ ಸ್ವಾಮೀಜಿಗಳೂ ಮಾತಾಡಿಲ್ಲ. ಎಲ್ಲರಿಗೂ ಕೈ ಮುಗಿಯುತ್ತೇನೆ. ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಬೇಡಿ. ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

 

Related