ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಸದ್ದು ಮಾಡುತ್ತಿದ್ದು ಇದರ ಬೆನ್ನಲ್ಲೇಇದೀಗ ಸಚಿವ ಸತೀಶ್ ಜಾರಕಿಹೊಳಿಯವರು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಇದು ಮತ್ತಷ್ಟು ಚರ್ಚೆಗೆ ದಾರಿ ಮಾಡಿ ಕೊಟ್ಟಂತಿದೆ. ಇದನ್ನೂ ಓದಿ: ಕೈ ವಿರುದ್ದ ಬಿಜೆಪಿ ಪ್ರತಿಭಟನೆ
ಹೌದು, ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲಿಯೇ ರಾಜಣ್ಣ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ತೆರಳಿರುವ ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ಬಳಿಕ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಹನಿಟ್ರ್ಯಾಪ್ ವಿಚಾರವನ್ನು ಚರ್ಚೆ ಮಾಡಿದ್ದಾರೆ.
ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡಿದ್ದಾರೆ. ಜೊತೆಗೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯನ್ನು ಭೇಟಿ ಮಾಡಿ ಹನಿಟ್ರ್ಯಾಪ್ ಮಾಡಿದ ಮಹಾನಾಯಕನ ಬಗ್ಗೆ ಚರ್ಚೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
