ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ಯಾಕೆ?

ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ಯಾಕೆ?

ಬೆಂಗಳೂರು: ರಾಜಕಾರಣ ಎಂದರೇನು ಹೀಗೆ, ರಾಜಕಾರಣದಲ್ಲಿ ಒಬ್ಬರ ಮೇಲೆ ಇನ್ನೊಬ್ಬರು ಆರೋಪ ಮಾಡುವುದು ಸರ್ವೇಸಾಮಾನ್ಯ.

ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಮಧ್ಯದಲ್ಲಿಯೇ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಒಬ್ಬ ದೇಶದ ಪ್ರಧಾನಿಯಾಗಿರುವವರೇ ಈಗ ಉತ್ತರ ಮತ್ತು ದಕ್ಷಿಣ ಭಾರತದ ಜನರ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಪ್ರಯತ್ನ ಪಡುತ್ತಿದ್ದಾರೆ ಎಂಬ ಆರೋಪವನ್ನು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ್ದಾರೆ.

ಈ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಇದನ್ನೂ ಓದಿ:ಪೊಲೀಸರ ಬಸ್ಸನ್ನೇ ಕಳ್ಳತನಕ್ಕೆ ಯತ್ನಿಸಿದ ಖತರ್ನ ಕಳ್ಳ

ಭಾರತದ ಕೃತಘ್ನ ಪ್ರಧಾನಿ ಈಗ ದಕ್ಷಿಣದ ರಾಜ್ಯಗಳ ಜನರನ್ನು ಗುರಿಯಾಗಿಸಿಕೊಂಡು ದಕ್ಷಿಣ ಮತ್ತು ಉತ್ತರ ಭಾರತೀಯರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ನಾವು ಕರ್ನಾಟಕವನ್ನು ಭಾರತದ ಮಗಳು ಎಂದು ಪರಿಗಣಿಸುತ್ತೇವೆ. ಭಾರತ ಎಂದಿಗೂ ಯಾರಿಗೂ ತಾರತಮ್ಯ ಮಾಡಿಲ್ಲ. ಆದರೆ ಮೋದಿಯಂತಹ ಜನರು ವಿಷವನ್ನು ಉಗುಳುತ್ತಾರೆ. ನಾವು ಪ್ರತಿ ರಾಜ್ಯದ ಜನರೊಂದಿಗೆ ಸಹಜೀವನದ ಸಂಬಂಧವನ್ನು ಹೊಂದಿದ್ದೇವೆ ಮತ್ತು ಅದರ ಬಗ್ಗೆ ನಾವು ಹೆಮ್ಮೆಪಡುತ್ತೇವೆ ಎಂದು ಸಿದ್ದರಾಮಯ್ಯ ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

Related