ಸುಮಲತಾ ದೆಹಲಿಗೆ ತೆರಳಿದ್ಯಾಕೆ?

ಸುಮಲತಾ ದೆಹಲಿಗೆ ತೆರಳಿದ್ಯಾಕೆ?

ಮಂಡ್ಯ: ಹಾಲಿ ಸಂಸದ ಸುಮಲತಾ ಅಂಬರೀಶ್ ಅವರು ಇಂದು ದೆಹಲಿಗೆ ತೆರಳಿ ಬಿಜೆಪಿಯ ನಾಯಕರುಗಳನ್ನು ಭೇಟಿಯಾಗಿ ಈ ಬಾರಿ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡದಿರುವ ಕಾರಣವನ್ನು ಜೆಪಿ ನಡ್ಡ ಮತ್ತು ಬಿಜೆಪಿ ನಾಯಕರ ಜೊತೆ ಮಹತ್ವದ ಚರ್ಚೆಯನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿದಿದ್ದು ಮೋದಿಯನ್ನು ಬೆಂಬಲಿಸುತ್ತಿರುವ ಹಾಲಿ ಸಂಸದೆ ಸುಮಲತ ಅವರಿಗೆ ಈ ಬಾರಿ ಟಿಕೆಟ್ ಸಿಗುವುದು ಅನುಮಾನವೆಂದು ತಿಳಿದು ಬಂದಿದೆ. ಹಾಗಾಗಿ ಇಂದು ಬಿಜೆಪಿಯವರಿಷ್ಟರನ್ನು ಭೇಟಿ ಮಾಡಿ ಮಹತ್ವದ ಮಾತುಕತೆಯನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಮುನಿಸಿಕೊಂಡಿರುವ ಬಿಜೆಪಿ ಬೆಂಬಲಿತ ಹಾಲಿ ಸದಸ್ಯೆ ಸುಮಲತಾ ಅಂಬರೀಷ್‌ ಅವರ ಮನವೊಲಿಕೆ ಪ್ರಯತ್ನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸುಮಲತಾ ಅವರನ್ನು ಮಾತುಕತೆಗೆ ಆಹ್ವಾನಿಸಿದ್ದು, ಸುಮಲತಾ ಅವರು ಭಾನುವಾರ ದೆಹಲಿಗೆ ತಲುಪಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ನಾಯಕರ ಆಹ್ವಾನದ ಮೇರೆಗೆ ದೆಹಲಿಗೆ ಆಗಮಿಸಿದ್ದೇನೆ. ಸೋಮವಾರ (18. ಮಾ) ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗುತ್ತೇನೆ. ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್‌ ಕುರಿತು ಚರ್ಚೆಯಾಗಲಿದೆ. ನಡ್ಡಾ ಭೇಟಿ ಬಳಿಕ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಬೇಕೆ ಅಥವಾ ಬೇಡವೆ ಎಂಬುದರ ಬಗ್ಗೆ ಯೋಚಿಸುತ್ತೇನೆ. ಸೋಮವಾರ ಎಲ್ಲ ವಿಚಾರ ಗೊತ್ತಾಗಲಿದೆ ಎಂದರು. ಮಂಡ್ಯ ಕ್ಷೇತ್ರ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ. ಮಂಡ್ಯದಿಂದಲೇ ನನ್ನ ಸ್ಪರ್ಧೆ ಎನ್ನುತ್ತಿದ್ದ ಸುಮಲತಾ ಅಂಬರೀಷ್‌ ಅವರು ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ನೀಡಿರುವುದಕ್ಕೆ ಹಾಗೂ ಕ್ಷೇತ್ರದ ಟಿಕೆಟ್ ಸಿಗದಿರುವುದಕ್ಕೆ ತೀವ್ರ ಅಸಮಾಧಾನಗೊಂಡಿದ್ದಾರೆ.

 

Related