ಕೇಳಿದ ಪ್ರಶ್ನೆಗೆ ತೇಜಸ್ವಿ ಸೂರ್ಯ ತಬ್ಬಿಬಾಗಿದ್ಯಾಕೆ?

ಕೇಳಿದ ಪ್ರಶ್ನೆಗೆ ತೇಜಸ್ವಿ ಸೂರ್ಯ ತಬ್ಬಿಬಾಗಿದ್ಯಾಕೆ?

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಕಾರ್ಯಕ್ರಮ  ಒಂದರಲ್ಲಿ ಠೇವಣಿದಾರರ ಪ್ರಶ್ನೆಗೆ ತಬ್ಬಿಬ್ಬಾಗಿ ಸಿಟ್ಟಿಗೆದ್ದು ಕಾರ್ಯಕ್ರಮದಿಂದ ಹೊರ ನಡೆದಿದ್ದಾರೆ.

ಏಪ್ರಿಲ್‌ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ ಎನ್ನಲಾಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಎಮರ್ಜೆನ್ಸಿ ಎಕ್ಸಿಟ್ ಡೋರ್” ಮೂಲಕ ಮತ್ತೊಮ್ಮೆ ಎಸ್ಕೇಪ್: ಕಾಂಗ್ರೆಸ್ ವ್ಯಂಗ್ಯ

ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ “ಎಮರ್ಜೆನ್ಸಿ ಎಕ್ಸಿಟ್ ಡೋರ್” ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆಂದು ವ್ಯಂಗ್ಯವಾಡಿದೆ. ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related