ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲ ಸಮಾನಗೊಳಿಸಿರುವುದನ್ನು ಖಂಡಿಸಿ ಈಗಾಗಲೇ ಸಾರ್ವಜನಿಕರು ಸೇರಿದಂತೆ ಸುದೀಪ್ ಹಾಗೂ ಇನ್ನಿತರ ಹಿರಿಯ ನಟ, ನಟಿಯರು ಆಕ್ರೋಶ ಹೊರಹಾಕುತ್ತಿರುವ ಬೆನ್ನೆಲೆ ಮತ್ತು ಇದೀಗ ಇಂದು (ಶನಿವಾರ ಸೆ. 06) ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಹಿರಿಯ ನಟಿಯರಾದ ಶ್ರುತಿ, ಜಯಪ್ರದ, ಮಾಳವಿಕ ಭೇಟಿಯಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರು: ಬಸ್ ಚಾಲಕನ ಮೇಲೆ ಖಾಕಿ ದರ್ಪ
ಕನ್ನಡ ಚಿತ್ರರಂಗದ ಹಿರಿಯ ನಟ, ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಡಿಕೆಶಿ, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕೂಡಲೇ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ.