ಸಿಎಂ ಅಧಿವೇಶನದಿಂದ ಮನೆಗೆ ತೆರಳಿದ್ಯಾಕೆ

ಸಿಎಂ ಅಧಿವೇಶನದಿಂದ ಮನೆಗೆ ತೆರಳಿದ್ಯಾಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಕಳೆದ ಒಂದು ವಾರದಿಂದ ಬಿಡುವಿಲ್ಲದೆ ಜಿಲ್ಲಾ ಪ್ರವಾಸ ಮತ್ತು ಇನ್ನಿತರ ಕೆಲಸಗಳನ್ನು ಕೈಗೊಂಡಿರುವುದರಿಂದ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಉಂಟಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಹೌದು, ಅನಾರೋಗ್ಯ ಹಿನ್ನೆಲೆ ವಿಶ್ರಾಂತಿಗಾಗಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಬಜೆಟ್ ಮಂಡನೆ ಬಳಿಕ ಎರಡು ದಿನ ನಿರಂತರವಾಗಿ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಸಣ್ಣ ಪ್ರಮಾಣದಲ್ಲಿ ಅನಾರೋಗ್ಯ ಉಂಟಾಗಿತ್ತು ಎನ್ನಲಾಗಿದೆ. ಹೀಗಾಗಿ ವಿಶ್ರಾಂತಿ ಪಡೆಯಲು ಸದ್ಯ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಮಧ್ಯಾಹ್ನದ ನಂತರ ನಡೆಯುವ ಸದನಕ್ಕೆ ಮತ್ತೆ ಹಾಜರಾಗುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

 

Related