ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಆರೋಪ ಮಾಡಿದ್ಯಾಕೆ?

ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಆರೋಪ ಮಾಡಿದ್ಯಾಕೆ?

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಗಿಫ್ಟ್ ಕಾರ್ಡ್ ನೀಡುವ ಮೂಲಕ ಮತದಾರರಿಗೆ ಆಮಿಷವೊಡ್ಡುತ್ತಿದ್ದಾರೆ ಓಡ್ಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾರೆ.

ಇಂದು (ಏಪ್ರಿಲ್ 26 ಶುಕ್ರವಾರ) ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಕುಟುಂಬ ಸಮೇತವಾಗಿ ಬಂದು ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗುರುವಾರ ರಾತ್ರಿಯಿಂದಲೂ ಗಿಫ್ಟ್ ಕಾರ್ಡ್ ಹಂಚುತ್ತಿದ್ದಾರೆ. 4 ಸಾವಿರದಿಂದ 10 ಸಾವಿರದ ಗಿಫ್ಟ್ ಕಾರ್ಡ್ ಹಂಚಿಕೆ ಮಾಡಲಾಗುತ್ತಿದೆ. ಚುನಾವಣಾ ಆಯೋಗ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಏನೇ ದೂರು ಕೊಟ್ಟರೂ ಉಪಯೋಗ ಇಲ್ಲ. ಚುನಾವಣಾ ಆಯೋಗ ಅಸ್ತಿತ್ವದಲ್ಲಿ ಇದೆಯಾ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

 

Related