ಎಚ್ ಡಿ ಕೆ ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ಯಾಕೆ?

ಎಚ್ ಡಿ ಕೆ ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ಯಾಕೆ?

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಹುಮತಗಳ ಅಂತರದಲ್ಲಿ ಗೆಲುವು ಸಾಧಿಸಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸೇವಕರಿಸಿರುವ ಎಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಮೇಲೆ ಇದೆ ಮೊದಲ ಬಾರಿಗೆ ಮಂಡ್ಯದಲ್ಲಿ ಜನತಾದರ್ಶನ ಕಾರ್ಯಕ್ರಮವನ್ನು ಮಾಡಿದ್ದಾರೆ.

ಆದರೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಜನತಾದರ್ಶನ ಕ್ಕೆ ಸರ್ಕಾರಿ ಅಧಿಕಾರಿಗಳು ಸಾತ್ ನೀಡದೆ ಗೈರಾಗಿದ್ದಾರೆ ಇದರಿಂದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸರಕಾರದ ವಿರುದ್ಧ ಗರಂ ಆಗಿದ್ದಾರೆ.

ಹೌದು, ಕೇಂದ್ರ ಸಚಿವ ಹೆಚ್ ಡಿಕೆ ಕುಮಾರಸ್ವಾಮಿ ಅವರು ತವರು ಜಿಲ್ಲೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಆದರೆ, ಜನತಾ ದರ್ಶನ ಕಾರ್ಯಕ್ರಮಕ್ಕೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಗೈರಾಗಿದ್ದು, ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಇರಿಸುಮುರಿಸಾಗಿದೆ. ಅಧಿಕಾರಿಗಳ ಗೈರಿನಿಂದ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಹೆಚ್​ಡಿ ಕುಮಾರಸ್ವಾಮಿ, “ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿಗಳಿಗೆ ನಾನು ಮನವಿ ಮಾಡಿದ್ದೆ. ಆದರೆ, ಜನತಾ ದರ್ಶನ ಕಾರ್ಯಕ್ರಮ ಹಾಜರಾಗದಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಸುತ್ತೋಲೆ ನೀಡಿದೆ. ಇದು ಸರ್ಕಾರದ ಸಣ್ಣತನ ತೋರಿಸುತ್ತದೆ ಎಂದು ಸಿಡಿಮಿಡಿಗೊಂಡರು. ಇದನ್ನೂ ಓದಿ: ಬಿ ಎಸ್ ವೈಗೆ ಮತ್ತಷ್ಟು ಸಂಕಷ್ಟ

ಗುರುವಾರ (ಜು.05) ನಡೆದ ಕ್ಯಾಬಿನೆಟ್​ನಲ್ಲಿ ಮುಖ್ಯಮಂತ್ರಿ, ಸಚಿವರಿಗೆಷ್ಟೇ ಮಾತ್ರ ಜನತಾ ದರ್ಶನ ಮಾಡುವ ಅಧಿಕಾರವಿದೆ ಎಂದು ಸರ್ಕಾರ ಸುತ್ತೋಲೆ ಹೊರಡಿಸಲಾಗಿದೆ. ಅಧಿಕಾರಿಗಳಿಗೂ ಕೂಡ ಈಗಾಗಲೇ ಈ ಕುರಿತು ಸೂಚನೆ‌ ನೀಡಲಾಗಿದೆ ಎಂದು ಆರೋಪ ಮಾಡಿದರು.

 

Related