ಪತ್ನಿ ಜತೆಗೆ ನಿಖಿಲ್ ರೊಮ್ಯಾಂಟಿಕ್   

ಬೆಂಗಳೂರು:  ಲಾಕ್ ಡೌನ್  ಅವಧಿಯಲ್ಲಿ ನಿಖಿಲ್ ತಮ್ಮ ಬಿಡದಿಯ ತೋಟದ ಮನೆಯಲ್ಲಿ ಪತ್ನಿ ಜತೆಗೆ ಸುತ್ತಾಡುತ್ತಿರುವ ರೊಮ್ಯಾಂಟಿಕ್ ಫೋಟೋವನ್ನು ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ.

ಇತ್ತೀಚೆಗಷ್ಟೇ ಮದುವೆಯಾದ ನವ ಜೋಡಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ಹೊಸ ಫೋಟೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇಬ್ಬರೂ ಕೈ ಕೈ ಹಿಡಿದುಕೊಂಡು ಸಾಂಪ್ರದಾಯಿಕ ಉಡುಗೆಯಲ್ಲಿ ರೊಮ್ಯಾಂಟಿಕ್ ಆಗಿರುವ ಕ್ಷಣಗಳ ಫೋಟೋ ನೋಡಿ ನೆಟ್ಟಿಗರು ಸಾಕಷ್ಟು ಸಂಖ್ಯೆಯಲ್ಲಿ ಲೈಕ್, ಕಾಮೆಂಟ್ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ. ಲಾಕ್ ಡೌನ್ ನಡುವೆಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ   ಜೋಡಿ ಇದೇ ಕಾರಣಕ್ಕೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವುದೇ ಕಡಿಮೆ                                              .

Related