ಕೇಂದ್ರ ಸಚಿವ ಸಂಪುಟ ಸೇರ್ತಾರಾ ಎಚ್.ಡಿ.ಕೆ?

ಕೇಂದ್ರ ಸಚಿವ ಸಂಪುಟ ಸೇರ್ತಾರಾ ಎಚ್.ಡಿ.ಕೆ?

 ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಕರ್ನಾಟಕ ರಾಜ್ಯದಲ್ಲಿ 28 ಕ್ಷೇತ್ರಕ್ಕೆ 28 ಕ್ಷೇತ್ರ ಗೆಲ್ಲುವ ಭರವಸೆಯನ್ನು ಹೊಂದಿದೆ.

ಇನ್ನು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ನಾಯಕರು ಈಗಾಗಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಲವಾರು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಜೆಡಿಎಸ್ ನ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ತಿಳಿದುಬಂದಿದೆ.

ಹೌದು, ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ದೊಡ್ಡ ಜಾಕ್ಪಾಟ್ ಹೊಡೆದಿದೆ ಎಂದು ಹೇಳಬಹುದು. ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ.

ಇದೇ ಜನವರಿ 17ರಂದು ಕೇಂದ್ರ ಸಚಿವರಾಗಿ ಕುಮಾರಸ್ವಾಮಿ ಪದಗ್ರಹಣ ಮಾಡಲಿದ್ದಾರೆ ಎಂದು ವರದಿಯಾಗಿದೆ. ಕೃಷಿ ಖಾತೆ ಅಥವಾ ಜಲಸಂಪನ್ಮೂಲ ಖಾತೆ ನೀಡಲು ಬಿಜೆಪಿ ಹೈಕಮಾಂಡ್ ಭರವಸೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಈ ಕುರಿತು ಇದೇ ಜನವರಿ 15ರಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ದೆಹಲಿ ಪ್ರಯಾಣ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

 

Related