ಬಿ. ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ಇಂದೇ ರಾಜೀನಾಮೆ ನೀಡ್ತಾರಾ?

ಬಿ. ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ಇಂದೇ ರಾಜೀನಾಮೆ ನೀಡ್ತಾರಾ?

ಬೆಂಗಳೂರು: ಕರ್ನಾಟಕ ರಾಜ್ಯದ ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಈಗಾಗಲೇ ಸಿಬಿಐ ತನಿಖೆ ಕೈಗೊಂಡಿದ್ದು, ಸಚಿವ ಬಿ ನಾಗೇಂದ್ರ ಅವರು ಇಂದೇ ರಾಜೀನಾಮೆ ಕೊಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದೆ.

ಇನ್ನು ರಾಜ್ಯದಾದ್ಯಂತ ವಿರೋಧ ಪಕ್ಷದ ನಾಯಕರುಗಳು ಬಿ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಮತ್ತೆ ನೀರಿನ ಆಹಾಕಾರ..!

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಬಿ ನಾಗೇಂದ್ರ ಅವರ ಜೊತೆ ಇದರ ಬಗ್ಗೆ ಮಾತುಕತೆ ನಡೆದಿದ್ದಾರೆ.

ಇದರ ಬೆನ್ನಲ್ಲೇ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದು, ಇಂದು (ಜೂನ್‌ 06 ಗುರುವಾರ) ಸಂಜೆ ವೇಳೆಗೆ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನಿಡುವ ಎಲ್ಲಾ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟಕ್ಕಿಳಿದಿದೆ.

ಅಲ್ಲದೇ ಈ ಪ್ರಕರಣದಲ್ಲಿ ಸ್ವತಃ ಸಿಬಿಐ ಪ್ರವೇಶ ಮಾಡಿ ತನಿಖೆ ಕೈಗೆತ್ತಿಕೊಂಡಿದ್ದು, ಹಲವರಲ್ಲಿ ತಳಮಳ ಶುರುವಾಗಿದೆ. ಹೀಗಾಗಿ ಸರ್ಕಾರಕ್ಕೆ ಮುಜುಗರವಾಗಬಾರದು ಎನ್ನುವ ಮುಂಜಾಗ್ರತಾವಾಗಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದಾರೆ.

 

Related